

ಕಲಬುರಗಿ : ರಾಜ್ಯದಲ್ಲಿ ಕಲುಷಿತ ನೀರು ಸೇವೆ ಅಸ್ವಸ್ಥಗೊಂಡ ಪ್ರಕರಣ ವರದಿಯಾಗುತ್ತಿರುವುದರಿಂದ ವಾಟರ್ ಆಡಿಟ್ ಕಮೀಟಿ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಂಕ್ ಖರ್ಗೆ ತಿಳಿಸಿದರು. ಕಲಬುರಗಿಯಲ್ಲಿ ಶುಕ್ರವಾರ ಪತ್ರಕರ್ತರ ಜತೆ ಮಾತನಾಡಿ, ಇತ್ತಿಚೆಗೆ ಚಿತ್ರದುರ್ಗ, ಮೊನ್ನೆ ರಾಯಚೂರು ಜಿ¯್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿರುವ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆರ್‌ಡಿಪಿಆರ್ ಇಲಾಖೆಯಿಂದ ಆರ್‌ಒ ಘಟಕಗಳು ಸೇರಿದಂತೆ ಇತರೆ ಕುಡಿಯಲು ಯೋಗ್ಯವಿರುವ ಕುರಿತು ಅಧ್ಯಯನ ಮಾಡುವ ಕೆಲಸವನ್ನು ಕಮಿಟಿ ಮಾಡಲಿದೆ. ಈ ತಂಡವು ರಾಜ್ಯದೆಲ್ಲಡೆ ಅಧ್ಯಯನ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡಲಿದೆ. ನಂತರ ಈ ಕುರಿತು ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ತಿಳಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಎ¯್ಲÁ ಕಡೆ ಕಾಮಗಾರಿ ಕಳಪೆಯಾಗಿಲ್ಲ. ಕೆಲವು ಕಡೆ ಆಗಿದ್ದು, ಮೂರನೇ ತಂಡದಿAದ ಪರಿಶೀಲನೆ ಮತ್ತು ತನಿಖೆ ಮಾಡಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.