25.7 C
Bangalore
Sunday, December 15, 2019

ಉಡುಪಿ ಶಾಲೆಗಳಲ್ಲೂ ವಾಟರ್ ಬೆಲ್

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಉಡುಪಿ: ಕೇರಳ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ದಿನದಲ್ಲಿ 3 ಬಾರಿ ಶಾಲಾ ಬೆಲ್ ಬಾರಿಸುವ ಪದ್ಧತಿ ಇದೆ. ಇದರಿಂದ ಮಕ್ಕಳ ಆರೋಗ್ಯದಲ್ಲಿ ಮಹತ್ತರ ಸುಧಾರಣೆಯಾಗಿದೆ. ಮಕ್ಕಳು ಆರೋಗ್ಯದ ದೃಷ್ಟಿಯಿಂದ ಹೆಚ್ಚು ನೀರು ಕುಡಿಯುವುದು ಅಗತ್ಯ. ಉಡುಪಿ ಜಿಲ್ಲೆಯಲ್ಲೂ ಈ ಯೋಜನೆ ಜಾರಿ ಕುರಿತಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು. ವಳಕಾಡು ಪ್ರೌಢಶಾಲೆಯಲ್ಲಿ ಗುರುವಾರ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೆ ದೋಸ್ತಿ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ವೇಳೆ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಮಾತನಾಡಿ, ಮಕ್ಕಳು ಯಾವುದೇ ಸಮಸ್ಯೆಗೆ ಒಳಗಾದಲ್ಲಿ ಅಥವಾ ಸಮಸ್ಯೆಗಳಿಂದ ಬಳಲುತ್ತಿದ್ದ ಮಕ್ಕಳು ಕಂಡುಬಂದಲ್ಲಿ ಟೋಲ್ ಫ್ರೀ ಸಂಖ್ಯೆ 1098ಗೆ ಕರೆ ಮಾಡಿ ನೆರವು ಪಡೆಯುವಂತೆ ತಿಳಿಸಿದರು. ಎಸ್.ಪಿ. ನಿಶಾ ಜೇಮ್ಸ್ ಮಾತನಾಡಿ, ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಯಲ್ಲಿ ಮಕ್ಕಳ ಸಮಸ್ಯೆ ಆಲಿಸಲು ಅಧಿಕಾರಿ ಮತ್ತು ಮಹಿಳಾ ಸಿಬ್ಬಂದಿ ನೇಮಕ ಮಾಡಿದ್ದು, ಅವರಿಗೆ ಮಕ್ಕಳ ಸಮಸ್ಯೆ ಆಲಿಸುವ ಕುರಿತು ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳು ಅವರಲ್ಲಿ ತಮ್ಮ ಸಮಸ್ಯೆ ತಿಳಿಸಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಪಂ ಸಿಇಒ ಪ್ರೀತಿ ಗೆಹ್ಲೋಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ, ಶಿಕ್ಷಣ ಇಲಾಖೆಯ ಜಾಹ್ನವಿ, ಬಾಲ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಬಿ ಪುರ್ಟಾಡೋ, ಮಾಜಿ ಅಧ್ಯಕ್ಷ ಬಿ.ಕೆ ನಾರಾಯಣ ಉಪಸ್ಥಿತರಿದ್ದರು. ಉಡುಪಿ ರೋಟರಿ ಅಧ್ಯಕ್ಷ ಜನಾರ್ಧನ ಭಟ್ ಸ್ವಾಗತಿಸಿದರು. ಚೈಲ್ಡ್ ಹೆಲ್ಪ್‌ಲೈನ್ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವಳಕಾಡು ಶಾಲೆ ಮುಖ್ಯಶಿಕ್ಷಕಿ ನಿರ್ಮಲಾ ವಂದಿಸಿದರು.

ಸಮಸ್ಯೆಗಳನ್ನು ಡಿಸಿ ಗಮನಕ್ಕೆ ತಂದ ವಿದ್ಯಾರ್ಥಿನಿಯರು
ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿ ರಕ್ಷಿತಾ, ವಿವಿಧ ಆಪ್‌ಗಳ ಮೂಲಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಸ್ಥಗಿತಗೊಂಡಿದೆ. ನೆರವು ನೀಡಿ ಎಂದು ಜಿಲ್ಲಾಧಿಕಾರಿ ಅವರನ್ನು ಕೋರಿದರು. ಶಿಕ್ಷಣ ಇಲಾಖೆ ಗಮನಕ್ಕೆ ತರಲಾಗುವುದು ಎಂದು ಡಿಸಿ ತಿಳಿಸಿದರು. ವಳಕಾಡು ಶಾಲೆಯಲ್ಲಿ 700 ವಿದ್ಯಾರ್ಥಿಗಳಿದ್ದು, ಒಬ್ಬರೇ ದೈಹಿಕ ಶಿಕ್ಷಕರಿದ್ದಾರೆ ಎಂಬ ಇನ್ನೋರ್ವ ವಿದ್ಯಾರ್ಥಿನಿಯ ಪ್ರಶ್ನೆಗೆ ಹೆಚ್ಚವರಿ ದೈಹಿಕ ಶಿಕ್ಷಕರ ನೇಮಕಕ್ಕೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಉತ್ತರಿಸಿದರು.

ಜಿಲ್ಲೆಯಲ್ಲಿ ಮಕ್ಕಳ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದ ಸಮಾಜ ನಿರ್ಮಾಣ ಮಾಡಬೇಕಿದೆ. ಮಕ್ಕಳಿಗೆ ನೀಡುವ ಶಿಕ್ಷಣ ಮಟ್ಟದಲ್ಲಿ ಇನ್ನಷ್ಟು ಸುಧಾರಣೆ ಆಗಬೇಕಿದೆ. ಮಕ್ಕಳಲ್ಲಿನ ಬುದ್ಧಿವಂತಿಕೆ ಬಳಸಿಕೊಳ್ಳಲು ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ.
ದಿನಕರ ಬಾಬು, ಜಿ.ಪಂ.ಅಧ್ಯಕ್ಷ, ಉಡುಪಿ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...