ಬೆಂಗಳೂರು: ರಾಜಧಾನಿಯಲ್ಲಿ ಶನಿವಾರ ಸುರಿದ ಮಳೆಗೆ ಸಾಯಿಲೇಔಟ್ ಸೇರಿ ನಗರದ ವಿವಿಧ ಬಡಾವಣೆಗಳ ನೂರಾರು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದ್ದರು.27 ಮರಗಳು ಧರಶಾಹಿಯಾದರೆ, 66 ರೊಂಬೆ-ಕೊಂಬೆಗಳು ಮುರಿದು ಬಿದ್ದು ಕಾರು ಸೇರಿ ಇತರೆ ವಾಹನಗಳು ಮತ್ತು ವಿದ್ಯುತ್ ಕಂಬಗಳು ಜಖಂಗೊಂಡಿದ್ದವು. ಬಿದ್ದ ಮರವನ್ನು ಪಾಲಿಕೆಯ ಅರಣ್ಯ ವಿಭಾಗದ ಸಿಬ್ಬಂದಿ ಭಾನುವಾರವೂ ತೆರವುಗೊಳಿಸಿದ್ದರು.ಬಿದ್ದ ಕಂಬಗಳನ್ನು ದುರಸ್ಥಿ ಮಾಡುವ ಕಾರ್ಯದಲ್ಲಿ ಬೆಸ್ಕಾಂ ಸಿಬ್ಬಂದಿ ತೊಡಗಿದ್ದರು.

ಮಹದೇವಪುರ ವಲಯ ವ್ಯಾಪ್ತಿಯ ಸಾಯಿ ಲೇಔಟ್ನಲ್ಲಿ ಜಲಾವೃತಗೊಂಡಿರುವ ಪ್ರದೇಶಗಳಿಗೆ ಟ್ರ್ಯಾಕ್ಟರ್ನಲ್ಲಿ ತೆರಳಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್, ನಿವಾಸಿಗಳ ಸಮಸ್ಯೆ ಆಲಿಸಿದರು. ನಿಂತಿರುವ ನೀರನ್ನು ಪಂಪ್ ಮೂಲಕ ತ್ವರಿತವಾಗಿ ಹೊರ ಹಾಕುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಲಾವೃತವಾಗುವುದನ್ನು ತಪ್ಪಿಸುವ ಸಲುವಾಗಿ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕವಾಗಿ ಸಂಪ್ ನಿರ್ಮಿಸಿ ತುಂಬುವ ನೀರನ್ನು ಹೊರ ಹಾಕಲು ಪಂಪ್ಸೆಟ್ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ತಂಡವನ್ನು ನಿಯೋಜಿಸಲಾಗುವುದು. ವಿಪತ್ತು ನಿರ್ವಹಣೆ ಅಡಿ ನೀರು ನುಗ್ಗಿರುವ ಮನೆಗಳಿಗೆ ಪರಿಹಾರ ನೀಡಲಾಗುವುದು ಎಂದು ನಿವಾಸಿಗಳಿಗೆ ಭರವಸೆ ನೀಡಿದರು.
ರಾಜಕಾಲುವೆಯಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛತೆ ಕಾಪಾಡಿಕೊಂಡು ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲಾಗುವುದು. ಈ ಲೇಔಟ್ನ್ನು ಬಿಡಿಎ ಅಭಿವೃದ್ಧಿಪಡಿಸಿದ್ದು, ಅಲ್ಲಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಪ್ರದೇಶವು ರಾಜಕಾಲುವೆಗಿಂತ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್ ಸಣ್ಣದಾಗಿರುವ ಪರಿಣಾಮ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಈ ಸಂಬಂಧ ಈಗಾಗಲೇ ರೈಲ್ವೆ ಇಲಾಖೆ ಜೊತೆ ಸಮನ್ವಯ ಸಾಧಿಸಿ ರೈಲ್ವೆ ವೆಂಟ್ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.ಇದನ್ನು ಶ್ರೀಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮಹೇಶ್ವರರಾವ್ ಹೇಳಿದರು.
ಮಹದೇವಪುರ ವಲಯ ಆಯುಕ್ತ ರಮೇಶ್, ಯಲಹಂಕ ವಲಯ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿಮ್, ಕಾರ್ಯಪಾಲಕ ಅಭಿಯಂತರು ಸೇರಿ ಮೆಟ್ರೋ ಅಧಿಕಾರಿಗಳು ಮತ್ತಿತರರಿದ್ದರು.
ಮಾನ್ಯತಾ ಟೆಕ್,ನಾಗವಾರ ಜಂನ್ ಪರಿಶೀಲನೆ: ಮಾನ್ಯತಾ ಟೆಕ್ ಮತ್ತು ನಾಗವಾರ ಜಂನ್ ಪರಿಶೀಲಿಸಿದ ಮುಖ್ಯ ಆಯುಕ್ತರು, ಮಾನ್ಯತಾ ಟೆಕ್ ಬಳಿ ಬರುವ ಮಾನ್ಫೋ ಹತ್ತಿರ ರಾಜಕಾಲುವೆ ಸಂಪರ್ಕ ಸರಿಯಾಗಿಲ್ಲದ ಕಾರಣ ಜಲಾವೃತವಾಗುತ್ತದೆ. ಈ ಸಂಬಂಧ ಹೊಸದಾಗಿ ಮಳೆ ನೀರುಗಾಲುವೆ ನಿರ್ಮಾಣದ ಸಲುವಾಗಿ ಮಾನ್ಯತಾ, ಇಬಿಎಸ್ ಐಟಿ ಪಾರ್ಕ್, ಮ್ಯಾನ್ಫೋ, ಕಾರ್ಲೆ ಇನ್ಫಾಟೆಕ್ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಾಗವಾರ ಜಂಕ್ಷನ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಈ ಜಂನ್ನಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು ಮಳೆ ನೀರುಗಾಲುವೆಯಲ್ಲಿ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಿದರು. ಹೈಡೆನ್ಸಿಟಿ ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದ ಕ್ರಾಸ್ ಕಲ್ವರ್ಟ್ ಕಾಮಗಾರಿ ಮಾಡಲು ಮುಖ್ಯ ಆಯುಕ್ತರು ಸೂಚಿಸಿದರು. ಥಣಿಸಂದ್ರದ ಬಳಿ ಮಳೆ ನೀರುಗಾಲುವೆಯಿಂದ ಹೂಳೆತ್ತಿದ್ದು,ಅಂದಾಜು 20 ಲೋಡ್ ಹೂಳನ್ನು ತೆರವುಗೊಳಿಸಲಾಗಿದೆ. ಬಾಕಿ ಹೂಳನ್ನು ತ್ವರಿತವಾಗಿ ತೆರವುಗೊಳಿಸಬೇಕು. ಮಳೆ ನೀರುಗಾಲುವೆ ಮೇಲೆ ಸ್ಲಾ$್ಯಬ್ ಗಳನ್ನು ಅಳಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವರುಣಾರ್ಭಟ: 21ರಂದು 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್