More

    ಸಿಂಗಟಾಲೂರು ಬ್ಯಾರೇಜ್‌ನಿಂದ ನದಿಗೆ ನೀರು

    ಮುಂಡರಗಿ: ಮಲೆನಾಡಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದೆ. ತಾಲೂಕಿನ ಸಿಂಗಟಾಲೂರು ಬ್ಯಾರೇಜ್‌ಗೆ ಒಳಹರಿವು ಹೆಚ್ಚಳವಾಗುತ್ತಿದೆ. ಹೀಗಾಗಿ ಬ್ಯಾರೇಜ್‌ನ 26 ಗೇಟ್‌ಗಳ ಪೈಕಿ 15 ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

    ಸಿಂಗಟಾಲೂರು ಬ್ಯಾರೇಜ್‌ನಿಂದ ಜು. 24ರಂದು 63,107ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ಬ್ಯಾರೇಜ್ 3.12ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಬ್ಯಾರೇಜ್ ಹಿನ್ನೀರಿನಿಂದ ಗುಮ್ಮಗೋಳ, ಬಿದರಹಳ್ಳಿ, ವಿಠಲಾಪುರ ಮತ್ತು ಹೂವಿನಹಡಗಲಿ ತಾಲೂಕಿನ ಅಲ್ಲಿಪುರ ಗ್ರಾಮಗಳು ಮುಳುಗಡೆ ಪ್ರದೇಶಕ್ಕೆ ಒಳಪಟ್ಟಿವೆ. ನಾಲ್ಕು ಗ್ರಾಮಗಳನ್ನು ಇದುವರೆಗೂ ಸಂಪೂರ್ಣವಾಗಿ ಸ್ಥಳಾಂತರಿಸದ ಕಾರಣ ಬ್ಯಾರೇಜ್‌ನಲ್ಲಿ 1.85ಟಿಎಂಸಿ ನೀರು ಮಾತ್ರ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

    ಕಳೆದ ವಾರ ಪ್ರಾರಂಭದಲ್ಲಿ ಒಳಹರಿವು ಹೆಚ್ಚಳವಾಗಿತ್ತು. ಎರಡ್ಮೂರು ದಿನಗಳ ನಂತರ ಮತ್ತೆ ಇಳಿಮುಖವಾಗಿತ್ತು. ಇದೀಗ ಮತ್ತೆ ಒಳಹರಿವು ಹೆಚ್ಚಾಗುತ್ತಿದ್ದು, ತುಂಗಭದ್ರಾ ನದಿ ಪಾತ್ರದ ಹಾಗೂ ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆ ಪ್ರದೇಶಕ್ಕೆ ಒಳಪಡುವ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

    ಮಲೆನಾಡಿನ ಹಲವೆಡೆ ಇನ್ನೂ ಮಳೆ ಸುರಿಯುತ್ತಿರುವುದರಿಂದ ನದಿಗೆ ಇನ್ನೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಹೆಚ್ಚಿದೆ. ಸುಮಾರು 1.50ಲಕ್ಷ ಕ್ಯೂಸೆಕ್‌ಗೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬಂದರೆ ಮುಳುಗಡೆ ಪ್ರದೇಶಕ್ಕೆ ಒಳಪಡುವ ಗ್ರಾಮಗಳಿಗೆ ಪ್ರವಾಹ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts