More

    ಜಲ ಜೀವನ್ ಮಿಷನ್ ಲಾಭ ಪಡೆದುಕೊಳ್ಳಿ

    ಕಡಬಿ: ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಭಾಗದ ಜನರ ನೀರಿನ ಹಾಹಾಕಾರ ತಪ್ಪಿಸಲು ಜಲ ಜೀವನ್ ಮಿಷನ್ ಎಂಬ ಯೋಜನೆ ಜಾರಿಗೆ ತಂದಿದ್ದಾರೆ. ದೇಶದ ಎಲ್ಲ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಪಂ ಸದಸ್ಯೆ ವಿದ್ಯಾರಾಣಿ ಸೊನ್ನದ ಹೇಳಿದ್ದಾರೆ.

    ಸಮೀಪದ ಯರಝರ್ವಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಗ್ರಾಮಸಭೆ ಉದ್ದೇಶಿಸಿ ಮಾತನಾಡಿ, ಪ್ರತಿ ಮನೆ ಮನೆಗೆ ಎರಡು ಅಥವಾ ಮೂರು ನಲ್ಲಿ ಜೋಡಿಸುವುದು ಯೋಜನೆ ಇದಾಗಿದ್ದು, ಅದಕ್ಕೆ ತಕ್ಕಂತೆ ನೀರು ಸಂಗ್ರಹ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದರು.

    ಪಿಡಿಒ ವಿರೂಪಾಕ್ಷ ಕೊಳವಿ ಮಾತನಾಡಿ, ಅಂಗಡಿಗಳ ಮಾಲೀಕರು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ದೈಹಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ವ್ಯಾಪಾರ ಮಾಡಲು ತಿಳಿಸಿದರು. ಗ್ರಾಮಸಭೆ ನೋಡಲ್ ಅಧಿಕಾರಿ ಬಿ.ಎಸ್. ಪಾವಟೆ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಶಾಂತವ್ವ ಜಕಬಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ ಲಿಂಗರಡ್ಡಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಚನ್ನಮ್ಮ ಕಿತ್ತೂರು: ಪ್ರಧಾನಮಂತ್ರಿ ಜಲಜೀವನ್ ಮಿಷನ್ ಯೋಜನೆ ಜನರ ಸಮಸ್ಯೆಗಳನ್ನು ಬಗೆಹರಿಸಲು ಇರುವ ಬಹುಮುಖ್ಯ ಯೋಜನೆ
    ಯಾಗಿದೆ. ಇದರ ಉಪಯುಕ್ತತೆಯನ್ನು ಜನರಿಗೆ ತಿಳಿಹೇಳಬೇಕು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯೋಜನೆಯ ಲಾಭವನ್ನು ಅರ್ಹ ಜನರಿಗೆ ತಲುಪುವಂತೆ ಮಾಡಲು ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಬೇಕೆಂದರು. ಜನರ ಸಮಸ್ಯೆಗಳನ್ನು ಅರಿತು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆದ್ಯತೆ ನೀಡಬೇಕು ಎಂದರು. ಬಿಜೆಪಿ ಕಿತ್ತೂರ ಮಂಡಳದ ಅಧ್ಯಕ್ಷ ಡಾ. ಬಸವರಾಜ ಪರವನ್ನವರ, ಕಿತ್ತೂರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾಂವಿ, ಎಇಇ ಎಚ್.ಕೆ. ವಂಟಗೋಡಿ, ಪಿಡಿಒ ಜಗದೀಶ ಗೌಡರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts