More

  ನೀರಿನ ಮಟ್ಟ ಏರಿಕೆ, ಬೆಳೆಗಳು ಜಲಾವೃತ

  ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳ ನೀರಿನ ಮಟ್ಟ ಏರಿಕೆ ಕಂಡಿದೆ. ಮಾರ್ಕೆಂಡೇಯ, ಬಳ್ಳಾರಿ ನಾಲಾ ತುಂಬಿ ಹರಿಯುತ್ತಿರುವುದರಿಂದ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಜಲಾವೃತಗೊಂಡಿವೆ. ಧಾರಾಕಾರವಾಗಿ ಮಳೆಯಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳ ನೀರಿನ ಮಟ್ಟದ ಏರಿಕೆಯಾಗಿದ್ದರಿಂದ ಕೆಳಹಂತದ 21 ಸೇತುವೆ ಮುಳುಗಡೆಯಾಗಿವೆ. ಪರಿಣಾಮ ತೀರದ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

  ಕೆಲ ಗ್ರಾಮಗಳು ಪರ್ಯಾಯ ಮಾರ್ಗ ಬಳಸಿ ಸುರಕ್ಷಿತ ಸ್ಥಳಗಳಿಗೆ ಬರುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂಗೆ 33,250 ಕ್ಯೂಸೆಕ್ ನೀರು ಹಾಗೂ ಸವದತ್ತಿ ತಾಲೂಕಿನ ನವೀಲುತೀರ್ಥ ಡ್ಯಾಂಗೆ 16,872 ಕ್ಯೂಸೆಕ್ ನೀರು ಹರಿದು ಬಂದಿದೆ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

  ಎರಡು ದಿನಗಳ ಅವಧಿಯಲ್ಲಿ ಮಾರ್ಕಂಡೇಯ ನದಿ ಹಾಗೂ ಬಳ್ಳಾರಿ ನಾಲಾ ಪ್ರವಾಹ ಹೆಚ್ಚಾಗಿ ನೂರಾರು ಹೆಕ್ಟೇರ್ ಕೃಷಿ ಜಮೀನು, ಮನೆಗಳು ಜಲಾವೃತಗೊಂಡಿವೆ. ಯಳ್ಳೂರು ಗ್ರಾಮದ ಸುತ್ತಮುತ್ತ ನೀರು ಆವರಿಸಿಕೊಂಡಿದೆ. ಕಡೋಲಿ, ಕಾಕತಿ ಗ್ರಾಮಗಳ ಪ್ರದೇಶದಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆ ಕಂಡಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts