ಕೇಂದ್ರದ ಜಲಧಾರೆ ಯೋಜನೆಯಡಿ ಅನುದಾನ ನೀಡಲು ಸರ್ಕಾರಕ್ಕೆ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೇಂದ್ರದ ಜಲಧಾರೆ ಯೋಜನೆ ಅನ್ವಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ತ್ತಾಯಿಸಿದ್ದೇನೆ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ರಾಜ್ಯದ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್​ಎನ್ ಪ್ರಸಾದ್ ಅವರನ್ನು ಮಂಗಳವಾರ ಬೆಳಗ್ಗೆ ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ಕ್ಷೇತ್ರದಲ್ಲಿರುವ ನೀರಿನ ಸಮಸ್ಯೆ ಬಗ್ಗೆ ವಿಸõತ ಮಾಹಿತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಲ್ಲದೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್ ಪ್ರಧಾನ ಕಾರ್ಯದರ್ಶಿಗಳ ಜತೆ ರ್ಚಚಿಸಿ ಕೂಡಲೇ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೇಲೂರು ತಾಲೂಕು ದೇವಿಕೆರೆಯಿಂದ ಚಿಕ್ಕಮಗಳೂರು ತಾಲೂಕು ಬೆಳವಾಡಿ ದೊಡ್ಡಕೆರೆಗೆ ನೀರು ಹರಿಸುವ ಕರಗಡ ನಾಲೆಗೆ ಆರ್​ಸಿಸಿ ಕಟ್ ಆಂಡ್ ಕವರ್ ಮತ್ತು ಸಿಮೆಂಟ್ ಸ್ಲ್ಯಾಬ್ ಅಳವಡಿಸಲು ಕೂಡಲೇ ಟೆಂಡರ್ ಕರೆಯುವಂತೆ ಆಗ್ರಹಿಸಿದ್ದೇನೆ ಎಂದಿದ್ದಾರೆ.

ಸತತ ಮೂರು ತಿಂಗಳ ಶ್ರಮದಿಂದ ಸಣ್ಣ ನೀರಾವರಿ ಸಚಿವರಿಗೆ ವಾಸ್ತವಾಂಶ ವಿವರಿಸಿ ಅನುಮೋದನೆ ಪಡೆದು ಸರ್ಕಾರದಿಂದ ಈ ಕಾಮಗಾರಿಗೆ 10 ಕೋಟಿ ರೂ.ಗೆ ಟೆಂಡರ್ ಕರೆಯುವಂತೆ ಆದೇಶ ಪಡೆದರೂ ಟೆಂಡರ್ ಕರೆದಿಲ್ಲ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಹಾಗೂ ಸಣ್ಣ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಇಬ್ಬರನ್ನು ಒಟ್ಟಿಗೆ ಸೇರಿಸಿ ರ್ಚಚಿಸಿದಾಗ ಸ್ಪಂದಿಸಿದ ಕಾರ್ಯದರ್ಶಿಗಳು ಹಾಗೂ ಮುಖ್ಯಇಂಜಿನಿಯರ್ ಇನ್ನೆರಡು ದಿನಗಳಲ್ಲಿ ತುರ್ತು ಟೆಂಡರ್ ಕರೆಯುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾಸ್ಪತ್ರೆ ಶೀಘ್ರ ಮೇಲ್ದರ್ಜೆಗೆ: ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗೆ ಬಜೆಟ್​ನಲ್ಲಿ 50 ಕೋಟಿ ರೂ. ಮೀಸಲಿಡುವಂತೆ ಸತತ ಒತ್ತಡ ಹಾಕಿದ್ದರಿಂದ 50 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಕಾರ್ಯಗತವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದೆ. ಇಲಾಖೆ ಕಾರ್ಯದರ್ಶಿ ತಕ್ಷಣವೇ ಇದಕ್ಕೆ ಸಂಬಂಧಿಸಿ ಈ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರ ಜತೆ ಸಭೆ ನಡೆಸಿ ರ್ಚಚಿಸಿ ಕಾಮಗಾರಿ ಕಾರ್ಯಗತಗೊಳಿಸುವುದಾಗಿ ಒಪ್ಪಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *