21.7 C
Bengaluru
Tuesday, January 21, 2020

ಬಿಸಿಲ ತಾಪಕ್ಕೆ ಬತ್ತಿದೆ ಜಲ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಆರ್.ಬಿ.ಜಗದೀಶ್ ಕಾರ್ಕಳ

ಏರುತ್ತಿರುವ ಬಿಸಿಲಿನ ತಾಪಕ್ಕೆ ಕಾರ್ಕಳದ ಜಲಮೂಲಗಳು ಬತ್ತುತ್ತಿವೆ. ಪರಿಣಾಮ ಪ್ರಸಕ್ತ ಬೇಸಿಗೆಯಲ್ಲಿ ನೀರಿಗೆ ತತ್ವಾರ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಕಾರ್ಕಳ ನಗರ ಪ್ರದೇಶಕ್ಕೆ ನೀರಿನ ಆಸರೆಯಾಗಿರುವ ಮುಂಡ್ಲಿಯ ಚಿತ್ರಣವೂ ಭಿನ್ನವಾಗಿಲ್ಲ. 12 ಅಡಿ ಎತ್ತರದ ಮುಂಡ್ಲಿ ಡ್ಯಾಂನಲ್ಲಿ ಪ್ರಸ್ತುತ ನಾಲ್ಕು ಅಡಿ ನೀರು ಇದೆ. ತಳಭಾಗದಲ್ಲಿ ಮರಳು ಶೇಖರಣೆಗೊಂಡಿರುವುದರಿಂದ ನೀರಿನ ಸಂಗ್ರಹ ಪ್ರಮಾಣ ಇನ್ನಷ್ಟು ಕುಸಿಯಲಿದೆ. ಜನವರಿ ಮೊದಲ ವಾರ ತುಂಬಿ ಹರಿಯುತ್ತಿದ್ದ ಮುಂಡ್ಲಿ ಅಣೆಕಟ್ಟೆಯಲ್ಲಿ ಪ್ರಸಕ್ತ ಏಕಾಏಕಿ ನೀರಿನ ಪ್ರಮಾಣ ಕುಸಿಯಲಾರಂಭಿಸಿದೆ. ಇದೇ ರೀತಿ ಮುಂದುವರಿದರೆ ಏ.15ರೊಳಗೆ ಮುಂಡ್ಲಿ ಸಂಪೂರ್ಣ ಬತ್ತಿ ಹೋಗುವ ಭೀತಿ ಇದೆ. ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವುದಕ್ಕೆ ಪುರಸಭಾ ಆಡಳಿತ ಮುಂದಾಗಿದೆ.

ಮುಂಡ್ಲಿಯಲ್ಲಿ ಅಣೆಕಟ್ಟು: 1994ರಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ದುರ್ಗಾ ಗ್ರಾಪಂ ವ್ಯಾಪ್ತಿಯ ಮುಂಡ್ಲಿಯಲ್ಲಿ ಸ್ವರ್ಣ ನದಿಗೆ ಅಡ್ಡವಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು. ಕೆಲ ವರ್ಷಗಳ ಹಿಂದೆ ಇದೇ ಪರಿಸರದಲ್ಲಿ ತಲೆಎತ್ತಿದ್ದ ಜಲವಿದ್ಯುತ್ ಘಟಕದಿಂದ ಕಿರುಅಣೆಕಟ್ಟಾಗಿ ಮಾರ್ಪಾಡಾಗಿದೆ. ಇಲ್ಲಿ ಸಂಗ್ರಹಿತ ನೀರನ್ನು ರಾಮಸಮುದ್ರ ಸಂಪಿಗೆ ಹಾಯಿಸಿ ಅಲ್ಲಿ ಶುದ್ಧೀಕರಿಸಿ ಕಾರ್ಕಳದ ವಿವಿಧೆಡೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

ರಾಮಸಮುದ್ರದಲ್ಲಿ ನಿರ್ಮಿಸಿದ ಸಂಪು ಎರಡು ಲಕ್ಷ ಲೀಟರ್ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ದಿನಂಪ್ರತಿ 4 ಟ್ಯಾಂಕ್‌ನಷ್ಟು ನೀರು ಮುಂಡ್ಲಿಯಿಂದ ಇಲ್ಲಿಗೆ ಸರಬರಾಜು ಆಗುತ್ತಿದೆ. ಜರಿಗುಡ್ಡೆ, ಬಂಗ್ಲೆಗುಡ್ಡೆ, ಪುಲ್ಕೇರಿ, ಕುಂಟಲ್ಪಾಡಿ ಮೊದಲಾದ ಪ್ರದೇಶಗಳು ಎತ್ತರವಾಗಿದ್ದು, ಅಲ್ಲಿ ಪ್ರತ್ಯೇಕ 50 ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್‌ಗಳಿವೆ.

ಉಡುಪಿಗೂ ಇದೇ ನೀರು: ಮಾಳ ಗ್ರಾಮದ ಮಲ್ಲಾರು, ಮುಳ್ಳೂರು, ಪಟ್ಟಣಹಿತ್ಲು, ಹೇರಂಜೆ, ಕಲ್ಯಾಣಿ, ಎಡಪ್ಪಾಡಿ, ಹೊಯ್ಗೆಹಿತ್ಲು, ಹೆಗ್ಗಡೆಮನೆ ಮತ್ತು ಕಡಂದಲಾಜೆ ಮೊದಲಾದೆಡೆಯ ತೊರೆಗಳು ಕಡಾರಿ(ಮಾಚೊಟ್ಟೆ) ಹೊಳೆ ಸೇರಿ ಎಣ್ಣೆಹೊಳೆಯನ್ನು ಕೂಡಿಕೊಂಡು ಗ್ರಾಮದ ಹೊರಗಡೆ ಸ್ವರ್ಣ ಎಂಬ ನಾಮಾಂಕಿತದೊಂದಿಗೆ ಉಡುಪಿಯ ಕಲ್ಯಾಣಪುರದಲ್ಲಿ ಸಮುದ್ರ ಸೇರುತ್ತದೆ. ತೆಳ್ಳಾರಿನ ಮುಂಡ್ಲಿಯಲ್ಲಿ ಕಿರುಅಣೆಕಟ್ಟು ನಿರ್ಮಿಸಿ ಕಾರ್ಕಳ ಪುರಸಭಾ ವ್ಯಾಪ್ತಿಗೆ ಹಾಗೂ ಹಿರಿಯಡ್ಕ ಬಜೆಯಲ್ಲಿ ನಿರ್ಮಿಸಿರುವ ಅಣೆಕಟ್ಟಿನಿಂದ ಉಡುಪಿ ನಗರ ಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.

ಕೃಷಿಕರಿಗೆ ಸಹಕಾರಿಯಾಗದ ಸ್ವರ್ಣಾ: ಪಶ್ವಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಹುಟ್ಟಿ ಹರಿಯುವ ಸ್ವರ್ಣಾ ನದಿ ಕೃಷಿಕರ ಪಾಲಿಗೆ ಅಷ್ಟೊಂದು ಪ್ರಯೋಜನಕಾರಿಯಾಗದೆ ಸಮುದ್ರಪಾಲಾಗುತ್ತಿದೆ. ಒಂದೆಡೆ ಇಳಿಮುಖವಾಗಿ ಗುಡ್ಡ, ಬೆಟ್ಟ, ಅರಣ್ಯ ಪ್ರದೇಶವಾಗಿ ಹರಿದು ಬರುವ ಸ್ವರ್ಣ ನದಿ ಕೆಲವೆಡೆ ಪ್ರಮುಖ ರಸ್ತೆಯ ಅಂಚಿನಲ್ಲಿ ಹಾದುಹೋಗುತ್ತದೆ. ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ನದಿ ಬರಡಾಗಿರುತ್ತದೆ. ಕೆಲವು ಕಡೆ ರೈತರು ಪಂಪ್ ಉಪಯೋಗಿಸಿ ಕೃಷಿಗೆ ಬಳಸುತ್ತಿದ್ದಾರೆ.

ರಾಮ ಸಮುದ್ರ ಕೆಸರುಮಯ: 1994ರ ಮುನ್ನ ಮುಂಡ್ಲಿ ಡ್ಯಾಂ ನಿರ್ಮಾಣ ಪೂರ್ತಿಗೊಳ್ಳುವ ತನಕ ಕಾರ್ಕಳ ನಗರ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರನ್ನು ರಾಮಸಮುದ್ರದಿಂದ ಪೂರೈಸಲಾಗುತ್ತಿತ್ತು. ಗೊಮ್ಮಟ ಬೆಟ್ಟಕ್ಕೆ ಮತ್ತೊಂದು ಪಾರ್ಶ್ವದಲ್ಲಿ ಕಾಣಸಿಗುವ ರಾಮಸಮುದ್ರದಲ್ಲಿ ಮಳೆಗಾಲ ವೇಳೆಗೆ ಸಂಗ್ರಹವಾಗುವ ನೀರು ಯಾವ ಋತುವಿನಲ್ಲೂ ಬತ್ತದೆ ಇರುವುದರಿಂದ ಪುರಸಭೆಗೆ ವರದಾನವಾಗಿದೆ. ಮುಂಡ್ಲಿಯಲ್ಲಿ ನೀರು ಬತ್ತಿದ ಹಾಗೂ ಅನಿವಾರ್ಯ ದಿನಗಳಲ್ಲಿ ರಾಮಸಮುದ್ರ ಕೆರೆಯ ನೀರನ್ನೇ ಶುದ್ಧೀಕರಿಸಿ ಕುಡಿಯಲು ಪೂರೈಸಲಾಗುತ್ತಿದೆ. ಇದರಲ್ಲಿ ಕೆಸರು ತುಂಬಿದ್ದು ನೀರು ಸಂಗ್ರಹಕ್ಕೆ ತೊಂದರೆಯಾಗಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...