20.4 C
Bangalore
Monday, December 9, 2019

ತುಂಬೆಯಿಂದ ನೀರು ಪಂಪಿಂಗ್ ಆರಂಭ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

<<<ಮೊದಲ ದಿನ ಶೇ.60ರಷ್ಟು ಪ್ರದೇಶಗಳಿಗೆ ಮಾತ್ರ ನೀರು>>>

ಮಂಗಳೂರು: ತುಂಬೆಯಲ್ಲಿ ಎರಡು ದಿನಗಳ ರೇಷನಿಂಗ್ ಬಳಿಕ ನೀರು ಪಂಪಿಂಗ್ ಆರಂಭಗೊಂಡಿದೆ. ಗುರುವಾರ ಬೆಳಗ್ಗೆ ಆರು ಗಂಟೆಗೆ ಪೂರೈಕೆ ಆರಂಭವಾಗಿದ್ದು, ಮೇ 13ರಂದು ಬೆಳಗ್ಗೆ 6 ಗಂಟೆವರೆಗೆ 96 ಗಂಟೆ ನಗರಕ್ಕೆ ನೀರು ಸರಬರಾಜಾಗಲಿದೆ.

ತುಂಬೆಯಲ್ಲಿ ಬುಧವಾರ ಸಾಯಂಕಾಲ 4.28 ಮೀ ಇದ್ದ ನೀರು ಗುರುವಾರ 4.24 ಮೀ.ಗೆ ಇಳಿದಿದೆ. ನಗರದಲ್ಲಿ ಮಧ್ಯಾಹ್ನ ವೇಳೆಗೆ ತಗ್ಗುಪ್ರದೇಶಗಳಿಗೆ ನೀರು ತಲುಪಿದ್ದು, ಎತ್ತರದ ಪ್ರದೇಶಗಳಿಗೆ ಇನ್ನಷ್ಟೇ ತಲುಪಬೇಕಿದೆ. ಮೊದಲ ದಿನ ನಗರದ ಶೇ.60ರಷ್ಟು ಪ್ರದೇಶಗಳಿಗೆ ನೀರು ಪೂರೈಕೆಯಾಗಿದೆ. ಶುಕ್ರವಾರ ಶೇ.75ರಷ್ಟು ಪ್ರದೇಶಗಳಿಗೆ ತಲುಪುವ ಸಾಧ್ಯತೆಯಿದೆ. ನೀರಿನ ನೆಟ್‌ವರ್ಕ್ ಖಾಲಿಯಾಗಿರುವುದರಿಂದ ಒತ್ತಡ ಕಡಿಮೆಯಾಗಿದ್ದು, ನೀರು ತಲುಪುವಲ್ಲಿ ತಡವಾಗುತ್ತಿದೆ.

ಅಧಿಕಾರಿಗಳ ಸ್ಪಷ್ಟನೆ: ಮಳೆ ಆರಂಭವಾಗುವವರೆಗೆ ನದಿಯಲ್ಲಿ ನೀರು ಉಳಿಸಬೇಕು ಎಂದು ತುಂಬೆಯಲ್ಲಿ ರೇಷನಿಂಗ್ ವ್ಯವಸ್ಥೆ ಮಾಡಲಾಗಿದೆ. ಸತತ 96 ಗಂಟೆ ನೀರು ಪೂರೈಕೆ ಮಾಡಿ, 24 ಗಂಟೆ ಪಂಪಿಂಗ್ ಸ್ಥಗಿತಗೊಳಿಸಲಾಗುತ್ತದೆ. ಪಂಪಿಂಗ್ ನಿಲ್ಲಿಸಿದಾಗ ತಗ್ಗುಪ್ರದೇಶದ ಮನೆಗಳಿಗೆ ಹೆಚ್ಚಿನ ನೀರು ಪೂರೈಕೆಯಾಗಿ ನೀರಿನ ನೆಟ್‌ವರ್ಕ್ ಖಾಲಿಯಾಗುತ್ತದೆ. ದಿನ ನೀರು ಪೂರೈಕೆ ಇದ್ದರೆ ಈ ರೀತಿ ಆಗುವುದಿಲ್ಲ. ಒಂದು ದಿನ ನೀರು ಕೊಟ್ಟು ಒಂದು ದಿನ ಸ್ಥಗಿತಗೊಳಿಸಿದರೆ ಯಾರಿಗೂ ನೀರು ಹೋಗುವುದಿಲ್ಲ. ಹಾಗಾಗಿ 4 ದಿನ ನೀರು ಕೊಡಲಾಗುತ್ತದೆ.

ಪಂಪಿಂಗ್ ಆರಂಭವಾದರೂ ನೀರು ಬಂದಿಲ್ಲ ಎಂದು ಸಾರ್ವಜನಿಕರು ಕರೆ ಮಾಡುತ್ತಾರೆ. ಹಾಗೆ ಒಮ್ಮೆಲೇ ಯಾರಿಗೂ ನೀರು ಹೋಗುವುದಿಲ್ಲ. ಹಿಂದೆ ಯಾರಿಗೆ ಯಾವ ಸಮಯದಲ್ಲಿ ನೀರು ಬರುತ್ತಿತ್ತೋ ಅದೇ ಸಮಯದಲ್ಲಿ ನೀರು ಸಿಗಲಿದೆ. ತುಂಬೆಯಿಂದ ಪೂರೈಕೆಯಾಗುವ 4 ದಿನದ ನೀರನ್ನು 6 ದಿನಕ್ಕೆ ಹಂಚಿಕೊಡಲಾಗುತ್ತದೆ. ಇದರಿಂದ ಎತ್ತರದಲ್ಲಿರುವವರಿಗೆ ಮಾತ್ರ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳ ಸ್ಪಷ್ಟ ಪಡಿಸಿದ್ದಾರೆ.

ನಿರೀಕ್ಷಿತ ಮಳೆ ಆಗಿಲ್ಲ: ಸಾಮಾನ್ಯವಾಗಿ ಪೂರ್ವ ಕರಾವಳಿ ಮಳೆಯಾದರೆ ಪಶ್ಚಿಮ ಕರಾವಳಿಯಲ್ಲಿ ಮಳೆಯಾಗುತ್ತದೆ. ಆದರೆ ವಾರದ ಹಿಂದೆ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ಫೋನಿ ಚಂಡಮಾಡುತದಿಂದ ಕರಾವಳಿ ಭಾಗದಲ್ಲಿ ಮಳೆಯೇ ಆಗಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಬೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇಲ್ಲ. ವಾರಗಳ ಕಾಲ ನಿರಂತರ ಮಳೆಯಾದರೆ ತುಂಬೆಯಲ್ಲಿ ನೀರು ನಿರೀಕ್ಷಿಸಬಹುದು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...