ಸಿಂಧನೂರು: ನಗರದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಕೇಂದ್ರ ಸರ್ಕಾರದ ಜಲಜೀವನ ಮಿಷನ್ ತಜ್ಞರ ತಂಡ ಗುರುವಾರ ಭೇಟಿ ನೀಡಿ ಪರಿಶೀಲಿಸಿತು.
ಇದನ್ನೂ ಓದಿ: ಕಾರಕುಂಡಿಯಲ್ಲಿನ ನೀರಿನ ಸಮಸ್ಯೆಗೆ ಮುಕ್ತಿ
ತಜ್ಞರಾದ ಜಗಜಿತ್ ಸಿಂಗ್ ಸೌದಿ, ದೇವೇಶಕುಮಾರ್ ಭಾರಧ್ವಾಜ್ ಕಲುಷಿತ ನೀರಿನ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮ, ಗ್ರಾಮ ನೀರು ನೈರ್ಮಲ್ಯ ಸಮಿತಿ ರಚನೆ ಮತ್ತು ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.
ಕುಡಿಯುವ ನೀರಿನ ಗುಣಮಟ್ಟದ ಕುರಿತು ಎಫ್‌ಟಿಕೆ ಬಳಕೆ ಕುರಿತು ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದರು. ಮನೆ ಮನೆಗೆ ಕಾರ್ಯಾತ್ಮಕ ನಳ, ವೈಯಕ್ತಿಕ ಶೌಚಗೃಹ, ಶಾಲೆ, ಅಂಗನವಾಡಿಗಳಲ್ಲಿ ಶೌಚಗೃಹಗಳ ನಿರ್ಮಾಣ ಕುರಿತು ಮಾಹಿತಿ ಸಂಗ್ರಹಿಸಿದರು.
ಜೆಇ ಮಂಜುನಾಥ, ಮೌನೇಶ್, ಅಜರುದ್ದೀನ್, ಶಾಂತಮುತ್ತಯ್ಯ ಗುರುವಿನ್, ಮೌನೇಶ ಬಡಿಗೇರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಇದ್ದರು.