25.5 C
Bangalore
Monday, December 16, 2019

ನೀರಿಗೆ ತತ್ವಾರ ಕೃಷಿಕ ಕಂಗಾಲು

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹರೀಶ್ ಮೋಟುಕಾನ ಮಂಗಳೂರು

- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ ಮುನ್ನವೇ ತೋಡು, ಕೆರೆ, ಬಾವಿ ನೀರಿಲ್ಲದೆ ಬತ್ತಿ ಹೋಗಿವೆ. ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ ಅಡಕೆ ತೋಟ ಕೆಂಬಣ್ಣಕ್ಕೆ ತಿರುಗಿದೆ. ಉಪ ಬೆಳೆಗಳಾದ ಬಾಳೆ, ಕಾಳು ಮೆಣಸು ಬಳ್ಳಿಗಳು ಕರಟಿ, ಕೃಷಿಕರು ಕಷ್ಟಕ್ಕೊಳಗಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27,092 ಹೆಕ್ಟೇರ್ ಪ್ರದೇಶದಲ್ಲಿ ವಾರ್ಷಿಕ ಸರಾಸರಿ 48,332 ಟನ್, ಉಡುಪಿಯಲ್ಲಿ 5864 ಹೆಕ್ಟೇರ್ ಪ್ರದೇಶದಲ್ಲಿ 9766 ಟನ್, ಕಾಸರಗೋಡಿನಲ್ಲಿ 15,033 ಹೆಕ್ಟೇರ್ ಪ್ರದೇಶದಲ್ಲಿ 37,669 ಟನ್ ಅಡಕೆ ಬೆಳೆಯಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ತತ್ವಾರ ಉಂಟಾಗುತ್ತಿದ್ದು, ಅಡಕೆ ತೋಟಗಳು ಕರಟುತ್ತಿವೆ. ಇದು ಫಸಲಿಗೆ ತೀವ್ರ ಹೊಡೆತ ನೀಡುತ್ತಿದೆ.

ಕೊಳವೆ ಬಾವಿ ಹೊಂದಿರುವವರಿಗೆ ನೀರು ಇದ್ದರೂ ವಿದ್ಯುತ್ ಸಮಸ್ಯೆಯಿಂದ ತೋಟಕ್ಕೆ ಸಕಾಲಕ್ಕೆ ನೀರು ಹಾಕಲು ಸಾಧ್ಯವಾಗುತ್ತಿಲ್ಲ. ಬಹುತೇಕ ಕಡೆ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿದೆ. ಹೊಸದಾಗಿ ಕೊರೆದರೂ ನೀರು ಸಿಗದಂತಾಗಿದೆ. ಉರಿ ಬಿಸಿಲಿನ ಪರಿಣಾಮ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗಗಳಲ್ಲಿ ಅಡಕೆ ತೋಟ ನೀರಿನ ಕೊರತೆಯಿಂದ ಹಳದಿ ಬಣ್ಣಕ್ಕೆ ತಿರುಗಿದೆ. ಹಿಂಗಾರ ಹಾಳೆಗಳು ಕರಟಿ ಹೋಗಿವೆ.
ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ಮುಂತಾದ ನದಿಗಳಿಂದ ಕೃಷಿಕರು ತೋಟಕ್ಕೆ ನೀರು ಬಳಸುವುದು ವಾಡಿಕೆ. ನದಿಗೆ ಅಡ್ಡವಾಗಿ ಬೇಸಿಗೆ ಕಾಲದಲ್ಲಿ ಕಟ್ಟ ಕಟ್ಟಿ ನೀರನ್ನು ಪಂಪ್ ಮೂಲಕ ತೋಟಕ್ಕೆ ಹಾಯಿಸುತ್ತಾರೆ. ಆದರೆ ಆ ನದಿಗಳೂ ಜನವರಿ ಬಳಿಕ ಬತ್ತಿ ಹೋಗುತ್ತಿರುವುದರಿಂದ ತೋಟಕ್ಕೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.

ಅಡಕೆ ಮರದಲ್ಲಿ ಈಗ ಹಿಂಗಾರ ಅರಳುವ ಸಮಯ. ಕೆಲವು ಕಡೆ ಹನಿ ಮಳೆಯಾಗುತ್ತಿದ್ದು ಹಿಂಗಾರ ಹಾಳೆಯೊಳಗೆ ನೀರಿನ ಹನಿಗಳು ನಿಂತು ಕೊಳೆಯಲಾರಂಭಿಸುತ್ತದೆ. ಈ ಸಮಯದಲ್ಲಿ ಅಡಕೆ ಮರದ ಬುಡಕ್ಕೆ ಉತ್ತಮವಾಗಿ ನೀರು ಬೀಳಬೇಕು ಎನ್ನುತ್ತಾರೆ ಸುಳ್ಯದ ಅನುಭವಿ ಕೃಷಿಕ ಉದಯ ಕಿರಣ್.
ಬೇಸಿಗೆ ಕಾಲದಲ್ಲಿ ತೋಟಕ್ಕೆ ಉತ್ತಮ ನೀರು ಬೀಳದೇ ಇದ್ದರೆ ಮುಂದಿನ ವರ್ಷಕ್ಕೆ ಫಸಲು ಇರುವುದಿಲ್ಲ. ಅಡಕೆ ಮರಗಳ ಮೇಲೂ ದುಷ್ಪರಿಣಾಮ ಬಿದ್ದು, ಮರ ಒಣಗಿ ಹೋಗುತ್ತದೆ. ಕೃಷಿಯನ್ನೇ ನಂಬಿಕೊಂಡ ಕೃಷಿಕರು ಜೀವನ ನಡೆಸಲು ಪರದಾಡುವಂತಾಗಿದೆ ಎಂದು ಬೆಳ್ತಂಗಡಿಯ ಕೃಷಿಕ ಕುಂಞ ಮೂಲ್ಯ ತಿಳಿಸಿದ್ದಾರೆ.

ಕುಡಿಯಲೂ ನೀರಿಲ್ಲ: ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕಡೆ ಬಾವಿ, ಕೆರೆ ಬತ್ತಿ ಹೋಗಿ ಕುಡಿಯಲು ನೀರಿಲ್ಲದಂತಾಗಿದೆ. ಕಿಲೋ ಮೀಟರ್‌ಗಟ್ಟಲೆ ದೂರ ನಡೆದು ಹೋಗಿ ನೀರು ಹೊತ್ತುಕೊಂಡು ಬರುತ್ತಿದ್ದಾರೆ. ರಸ್ತೆ ಸೌಕರ್ಯ ಇರುವಲ್ಲಿಗೆ ಗ್ರಾಮ ಪಂಚಾಯಿತಿಗಳು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿವೆ. ರಸ್ತೆ ಸಂಪರ್ಕ ಇಲ್ಲದೆ ಗುಡ್ಡ ಪ್ರದೇಶಗಳಲ್ಲಿ ವಾಸವಿರುವವರು ತೊಂದರೆ ಅನುಭವಿ ಸುವಂತಾಗಿದೆ.

ಹಿಂದಿನ ವರ್ಷಗಳಲ್ಲಿ ಮೇ ತಿಂಗಳ ತನಕ ಕೊಳವೆ ಬಾವಿಯ ನೀರು ಕೃಷಿಗೆ ಲಭ್ಯವಾಗುತಿತ್ತು. ಮೂರು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ನಾಲ್ಕನೇ ಕೊಳವೆ ಬಾವಿ ಕೊರೆಯಲಾಗಿದೆ. ಕೃಷಿಗೆ ಬೇಕಾದಷ್ಟು ನೀರು ಸಿಗುತ್ತಿಲ್ಲ. ಹಾಗಾಗಿ ನೀರಿಲ್ಲದೆ ಅಡಕೆ ತೋಟ ಹಳದಿ ಬಣ್ಣಕ್ಕೆ ತಿರುಗಿದೆ. ಒಂದೆರಡು ಮಳೆ ಬಾರದೆ ಇದ್ದರೆ ತೋಟ ಕರಟಿ ಹೋಗುವ ಸಾಧ್ಯತೆ ಇದೆ.
|ಸದಾನಂದ ಭಂಡಾರಿ ಕಿನ್ನಿಮಜಲು ಬೀಡು, ಕೃಷಿಕ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...