More

    ಸುಂದರನಗರ ನಿವಾಸಿಗಳಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ

    ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರಕ್ಕೆ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು.

    ಸುಂದರನಗರದಲ್ಲಿ ಕಳೆದ 8 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದ ಕಾರಣ ಟ್ಯಾಂಕರ್‌ನ ಮೂಲಕ ನೀರು ಸರಬರಾಜು ಮಾಡಲಾಯಿತು. ಪಂಚಾಯಿತಿಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

    ಕೂಡುಮಂಗಳೂರು ಗ್ರಾಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಸುಂದರನಗರ ಹಾಗೂ ವಿನಾಯಕ ಬಡಾವಣೆಯಲ್ಲಿ ಹೆಚ್ಚು ನೀರಿನ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ತಾತ್ಕಾಲಿಕವಾಗಿ ಖಾಸಗಿ ಕೊಳವೆ ಬಾವಿಗಳಿಂದ ಪೈಪ್ ಸಂಪರ್ಕ ಕೊಟ್ಟು ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.

    ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯು ಸಂಪೂರ್ಣ ಕಳಪೆ ಹಾಗೂ ಅಪೂರ್ಣವಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಶಾಸಕ ಡಾ.ಮಂತರ್‌ಗೌಡ ಅವರ ಗಮನಕ್ಕೆ ತರಲಾಗಿದ್ದು, ಶಾಸಕರು ಆದಷ್ಟು ಬೇಗ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಾರ್ವಜನಿಕರು ಕೂಡ ನೀರು ಪೂಲು ಮಾಡದೆ ಮಿತವಾಗಿ ಬಳಸಬೇಕು ಎಂದು ಮನವಿ ಮಾಡಿದರು. ನೀರುಗಂಟಿ ವಸಂತ್ ಕುಮಾರ್ ಹಾಗೂ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts