More

    ಹಿರೇಕೆರೂರ, ರಟ್ಟಿಹಳ್ಳಿ ತಾಲೂಕಿನ 45 ಗ್ರಾಮಗಳ 88 ಕೆರೆಗಳಿಗೆ ನೀರು

    ರಟ್ಟಿಹಳ್ಳಿ: ಕರ್ನಾಟಕ ನೀರಾವರಿ ನಿಗಮದಿಂದ 185 ಕೋಟಿ ರೂಪಾಯಿ ವೆಚ್ಚದಲ್ಲಿ ಉಕ್ಕಡಗಾತ್ರಿ ಕ್ರಾಸ್ ಬಳಿ ತುಂಗಭದ್ರಾ ನದಿ ಹತ್ತಿರ ಜಾಕ್​ವೆಲ್ ನಿರ್ವಿುಸಿ, ಪೈಪ್​ಲೈನ್ ಮೂಲಕ ರಟ್ಟಿಹಳ್ಳಿ ಮತ್ತು ಹಿರೇಕೆರೂರು ತಾಲೂಕಿನ 45 ಗ್ರಾಮಗಳ 88 ಕೆರೆಗಳಿಗೆ ನೀರು ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

    ಯೋಜನೆಯ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವುದರಿಂದ ಕೃಷಿ ಚಟುವಟಿಕೆಗೆ ಸಹಕಾರಿಯಾಗುತ್ತದೆ. ಕೆರೆಗಳಲ್ಲಿ ಸದಾ ನೀರು ಇರುವುದರಿಂದ ಅಂತರ್ಜಲಮಟ್ಟ ಹೆಚ್ಚಳ ಜತೆಗೆ ಉತ್ತಮ ಬೆಳೆ ಬೆಳೆಯಲು ಸಹಾಯವಾಗುತ್ತದೆ ಎಂದರು. ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ಸರ್ವಜ್ಞ ಏತ ನೀರಾವರಿ ಯೋಜನೆಯಿಂದ ರಟ್ಟಿಹಳ್ಳಿ ಮತ್ತು ಹಿರೇಕೆರೂರು ತಾಲೂಕಿನ 45 ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ನೀರನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದರು. ಗುತ್ತಿಗೆದಾರ ಜೆ.ಪಿ. ಪ್ರಕಾಶ, ಡಿ.ಸಿ. ಪಾಟೀಲ, ವನಜಾ ಪಾಟೀಲ, ಪಪಂ ಅಧ್ಯಕ್ಷ ಗುರುಶಾಂತ ಯತ್ನಹಳ್ಳಿ, ರವಿ ಬಾಳೇಕಾಯಿ, ತಾಪಂ ಮಾಜಿ ಸದಸ್ಯ ಆರ್.ಎನ್. ಗಂಗೋಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts