More

    ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮೂನ್ಸೂಚನೆ

    ಬೆಂಗಳೂರು: ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು (ಮಾರ್ಚ್​ 24) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

    ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

    ಇದನ್ನೂ ಓದಿ: ‘F*** Off Man’; ರಚಿನ್​ ಔಟಾದಾಗ ಬೆರಳು ತೋರಿಸಿದ ವಿರಾಟ್​ ಕೊಹ್ಲಿ, ವಿಡಿಯೋ ವೈರಲ್

    ಕಲಬುರಗಿಯಲ್ಲಿ (38.8 ಡಿಗ್ರಿ) ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ವಿಜಯಪುರದಲ್ಲಿ (20.1) ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

    ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲೆಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts