ವಯನಾಡು ಭೂದುರಂತ: ಮೃತಪಟ್ಟವರ ಸಂಖ್ಯೆ 121! ನೂರಾರು ಜನ ಕಣ್ಮರೆ

ವಿಜಯವಾಣಿ - 2024-07-31T065024.088
Published on

ವಯನಾಡು: ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಇದೀಗ 121ಕ್ಕೆ ಏರಿಕೆಯಾಗಿದೆ. ಮಣ್ಣಿನಡಿ ನೂರಾರು ಮಂದಿ ಸಿಲುಕಿದ್ದು, ರಕ್ಷಣಾ ಪಡೆಗೆ ಸಿಗದಂತೆ ಕಣ್ಮರೆಯಾಗಿದ್ದಾರೆ.  ಮೃತರ ದೇಹಗಳು ಮೆಪ್ಪಾಡಿ ಆಸ್ಪತ್ರೆಯಲ್ಲಿದ್ದು, ಗುರುತು ಪತ್ತೆಹಚ್ಚುವಿಕೆಗೆ ರಕ್ಷಣಾ ಪಡೆ ಹರಸಾಹಸ ಪಡುವಂತಾಗಿದೆ.

ಸದ್ಯ ಶೋಧ ಕಾರ್ಯ ಭರದಿಂದ ಸಾಗಿದ್ದೇ ಆದರೂ ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವುದು ಕಷ್ಟಸಾಧ್ಯವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.....
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net