ವಯನಾಡು ಭೂಕುಸಿತ, ಮುನ್ನೆಚ್ಚರಿಕೆ ನೀಡಿದ್ದರೂ ಕೇರಳ ಸರ್ಕಾರ ಕ್ರಮಕೈಗೊಳ್ಳಲಿಲ್ಲ: ಅಮಿತ್​ ಷಾ

Untitled-design-2024-07-31T165813.901
Published on

ನವದೆಹಲಿ: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಕೇರಳ ಸರ್ಕಾರಕ್ಕೆ ಜುಲೈ 23ರಂದು ಮೊದಲ ಎಚ್ಚರಿಕೆ ನೀಡಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ವಯನಾಡಿನಲ್ಲಿ ಭೂಕುಸಿತವಾಗುವ ಒಂದು ವಾರದ ಮೊದಲು ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರಕ್ಕೆ ಕೇಂದ್ರವು ಎಚ್ಚರಿಕೆ ನೀಡಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಕೇರಳಕ್ಕೆ ಮುಂಚಿತವಾಗಿ ಕಳುಹಿಸಲಾಗಿದೆ ಆದರೆ ಸಕಾಲದಲ್ಲಿ ಜನರನ್ನು ಸ್ಥಳಾಂತರಿಸಲು ಪಿಣರಾಯಿ ವಿಜಯನ್ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.

ನೈಸರ್ಗಿಕ ವಿಕೋಪಗಳ ಬಗ್ಗೆ ಕನಿಷ್ಠ ಏಳು ದಿನಗಳ ಮುಂಚಿತವಾಗಿ ಎಚ್ಚರಿಕೆ ನೀಡಬಲ್ಲ ನಾಲ್ಕು ದೇಶಗಳಲ್ಲಿ ಭಾರತವೂ ಸೇರಿದೆ. ಏಳು ದಿನಗಳ ಹಿಂದೆ ಕೇರಳ ಸರ್ಕಾರಕ್ಕೆ ಈ ಎಚ್ಚರಿಕೆ ನೀಡಲಾಗಿದ್ದು, ಜುಲೈ 24 ಮತ್ತು 25ರಂದು ಮತ್ತೊಮ್ಮೆ ಎಚ್ಚರಿಕೆ ನೀಡಲಾಯಿತು. ಜುಲೈ 26 ರಂದು 20 ಸೆಂ.ಮೀ. ಗಿಂತ ಹೆಚ್ಚು ಮತ್ತು ಭಾರೀ ಮಳೆಯಾಗಲಿದೆ ಎಂದು ಸೂಚಿಸಲಾಗಿತ್ತು ಎಂದು ಅವರು ಹೇಳಿದರು.

ಎನ್‌ಡಿಆರ್‌ಎಫ್ ತಂಡಗಳ ಆಗಮನದ ನಂತರ ಕೇರಳ ಸರ್ಕಾರವು ಎಚ್ಚೆತ್ತುಕೊಂಡಿದ್ದರೆ ಸಮಯೋಚಿತ ಕ್ರಮದಿಂದ ವಯನಾಡಿನಲ್ಲಿ ಸಾವುನೋವುಗಳನ್ನು ಕಡಿಮೆ ಮಾಡಬಹುದಿತ್ತು. ಈ ಸಮಯದಲ್ಲಿ ಕೇಂದ್ರ ಸರ್ಕಾರವು ಪಕ್ಷ-ಭೇದವಿಲ್ಲದೆ ಕೇರಳದ ಜನರೊಂದಿಗೆ ದೃಢವಾಗಿ ನಿಂತಿದೆ. ಸದನದಲ್ಲಿ ಈ ವಿಷಯಗಳನ್ನು ಹೇಳಲು ಬಯಸುವುದಿಲ್ಲ ಆದರೆ ಕೇಂದ್ರದ ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಪ್ರಶ್ನಿಸುವವರಿಗೆ ಹೇಳಲು ಬಯಸುತ್ತೇನೆ. ಕೇರಳ ಸರ್ಕಾರಕ್ಕೆ ಏಳು ದಿನಗಳ ಮೊದಲೇ ಮಾಹಿತಿ ನೀಡಲಾಗಿತ್ತು ಎಂದು ಅವರು ತಿಳಿಸಿದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net