More

  ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ: ಸಿದ್ದರಾಮಯ್ಯ

  ಬೆಂಗಳೂರು: ಕರ್ನಾಟಕದಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, 2008 ರಿಂದ 2013 ರವರೆಗೆ 22,000 ಕೋಟಿ ರೂ., 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ಖರ್ಚು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿ ಮಾತನಾಡಿದರು.

  ಹಣ ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.

  ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿ.ಟಿ.ಸಿ.ಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್.ಸಿ.ಎಸ್.ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ ಎಂದರು.

  ಶೇ.7 ಪರಿಶಿಷ್ಟ ವರ್ಗ, ಶೇ.17.15ಪರಿಶಿಷ್ಟ ಜಾತಿಯವರಿದ್ದಾರೆ. ಶೇ. 21.1 ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ. ಕಳೆದ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ.ಎಸ್‌ಪಿ/ ಟಿಎಸ್‌ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

  ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್‌ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

  See also  ಶೈಕ್ಷಣಿಕ ಪ್ರಗತಿಗೆ ಟ್ಯಾಬ್ ಬಳಕೆ ಸಹಕಾರಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts