ಒಳ‌ಮೀಸಲಾತಿ ಜಾರಿಗೆ ಬದ್ಧ ; 3 ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಆರಂಭ: CM ಸಿದ್ದರಾಮಯ್ಯ

blank

ಬೆಂಗಳೂರು : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ಧ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಹೇಳಿದರು.

blank

“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ ಎಂದರು.

ಇದನ್ನೂ ಓದಿ:11 ವರ್ಷದೊಳಗಿನ ಮಕ್ಕಳು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಬೇಕು ಪಾಲಕರ ಒಪ್ಪಿಗೆ: ಆರ್‌ಟಿಎ ಹೊಸ ನೀತಿ ಜಾರಿ|Uae

ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ

ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದರು.

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025

19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.

ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ ಎಂದರು.

ಇದನ್ನೂ ಓದಿ:ಫ್ಲೋರಿಡಾದ ಲೇಕ್‌ಲ್ಯಾಂಡ್​ನಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ: ಭರದಿಂದ ಸಾಗಿದ ಪೂರ್ಣ ಪ್ರಮಾಣದ ಸಿದ್ಧತೆ! NAVIKA 2025

ಮೊಬೈಲ್ ಆಪ್

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಂಪಾದಕೀಯ; ಶಾಶ್ವತ ಪರಿಹಾರ ಅಗತ್ಯ

ನಾಡು ನುಡಿಯ ಅಸ್ಮಿತೆ ಕನ್ನಡ ಸಾಹಿತ್ಯ ಪರಿಷತ್ತು

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank