ಯುಕೆಪಿ ಪೂರ್ಣಗೊಳಿಸುವ ಛಲ ನಮ್ಮದು; ಸಚಿವ ಎಚ್. ಕೆ. ಪಾಟೀಲ

HK PATIL MEETING IN CONGRESS OFFICE

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲ ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಹೇಳಿದರು.

blank

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮ’ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಬಿಜೆಪಿಯ ಸಂಸದರು, ಸಚಿವರು ಸೇರಿದಂತೆ ಯಾವ ಜನಪ್ರತಿನಿಧಿಗಳೂ ಈ ಬಗ್ಗೆ ಧ್ವನಿ ಎತ್ತಿಲ್ಲ. ಆದರೆ, ಉತ್ತರ ಕರ್ನಾಟಕದ ನಾವೆಲ್ಲ ಸಚಿವರು ಸಿಎಂ ಅವರನ್ನು ಭೇಟಿ ಮಾಡಿ ಪ್ರಧಾನಿ ಮೇಲೆ ಈ ಕುರಿತು ಒತ್ತಡ ತರುವಂತೆ ಮನವಿ ಮಾಡಿದ್ದೇವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ರೂ. 5500 ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆದರೆ, ಈವರೆಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಬರಗಾಲ ಸಮಯದಲ್ಲಿ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆಯಬೇಕಾಯಿತು. ಕೇಂದ್ರದ ಅಸಹಕಾರದ ನಡುವೆಯೂ ಸಿಎಂ ಎಸ್. ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿದ್ದು, ಇವುಗಳಲ್ಲಿ 2000 ರಕ್ಷಿತ ಸ್ಮಾರಕಗಳಿವೆ. ವಿಜಯಪುರ ಜಿಲ್ಲೆಯಲ್ಲಿರುವಷ್ಟು ಪ್ರವಾಸೋದ್ಯಮ ಸ್ಥಳಗಳು ರಾಜ್ಯದ ಬೇರಾವ ಜಿಲ್ಲೆಗಳಲ್ಲಿಯೂ ಇಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗೆ ನಾವು ಒತ್ತು ನೀಡಿದ್ದೇವೆ. ಸಚಿವ ಎಂ.ಬಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಮೂರು ಲಕ್ಷ ಜನ ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಸರಕಾರದ ಎರಡು ವರ್ಷದ ಪ್ರಗತಿಯ ಸಮಾವೇಶ ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು 1.25 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆ ಎತ್ತುವಲ್ಲಿ ಸಹಾಯವಾಗಿವೆ. ಪ್ರತಿಯೊಂದು ಕುಟುಂಬಕ್ಕೆ ವರ್ಷಕ್ಕೆ ರೂ. 60 ಸಾವಿರ ರೂಪಾಯಿ ಸೌಲಭ್ಯ ಒದಗಿಸಿವೆ. ಟೀಕೆ ಮಾಡುವವರಿಗೆ ಈ ಸಮಾವೇಶ ಸೂಕ್ತ ಉತ್ತರ ನೀಡಲಿದೆ. ಎರಡು ವರ್ಷಗಳಲ್ಲಿ ಸರ್ಕಾರ ಮಾಡಿರುವ ಕೆಲಸ ಅಷ್ಟಿಷ್ಟಲ್ಲ. ಬಡವರ ಕಣ್ಣೀರು ಒರೆಸಿ, ಹಸಿವು ನೀಗಿಸಿ ಬದುಕು ಹಸನಾಗಿಸುವ ಕೆಲಸ ನಡೆದಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಗ್ಯಾರಂಟಿ ಯೋಜನೆಗಳು ಶೇ. 98.5 ಅರ್ಹರಿಗೆ ತಲುಪಿಸುವ ಕೆಲಸವಾಗಿದೆ. ಈವರೆಗೆ ರೂ. 90 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ಎಂದರು.

ಡಾ. ಮಹಾಂತೇಶ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, ತಿಕೋಟಾ ತಾಲೂಕಿನಲ್ಲಿ 96 ಹಳ್ಳಿಗಳಿಗೆ ಕಂದಾಯ ಗ್ರಾಮದ ಮಾನ್ಯತೆ ಸಿಕ್ಕಿದೆ. ಈ ತಾಲೂಕಿನ 4486 ಮತ್ತು ಬಬಲೇಶ್ವರ ತಾಲೂಕಿನಲ್ಲಿ 877 ಫಲಾನುಭವಿಗಳ ಹಕ್ಕುಪತ್ರ ಅರ್ಜಿಗಳು ಪುರಸ್ಕೃತಗೊಂಡಿವೆ ಎಂದು ತಿಳಿಸಿದರು.

ವಿಪ ಸದಸ್ಯ ಸುನೀಲಗೌಡ ಪಾಟೀಲ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಮುಖಂಡರಾದ ಕೆ.ಎಚ್. ಮುಂಬಾರೆಡ್ಡಿ, ಎಚ್.ಎಸ್. ಕೊರಡ್ಡಿ, ಅಪ್ಪುಗೌಡ ಪಾಟೀಲ, ಯಾಕೂಬ ಜತ್ತಿ, ವಿ.ಎಸ್. ಪಾಟೀಲ, ಆನಂದಕುಮಾರ ದೇಸಾಯಿ, ಬಸನಗೌಡ ಪಾಟೀಲ, ಮಲ್ಲು ದಳವಾಯಿ, ಉಮೇಶ ಮಲ್ಲಣ್ಣವರ, ಲಕ್ಷ್ಮಣ ಚಿಕದಾಣಿ, ರಮೇಶ ಸುಳಿಭಾವಿ, ಚನ್ನಪ್ಪ ಕೊಪ್ಪದ, ಪೀರ ಪಟೇಲ್, ಎಲ್.ಎಸ್. ನಿಡೋಣಿ, ರಫೀಕ್ ಕಾನೆ, ಮದ್ದುರಾಜ ಕುಲಕರ್ಣಿ, ಡಾ. ಗಂಗಾಧರ ಸಂಬಣ್ಣಿ, ಅಬ್ದುಲ್‌ಹಮೀದ್ ಮುಶ್ರೀಫ್ ಮತ್ತಿತರರಿದ್ದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank