More

    ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದೇವೆ

    ಬೇಲೂರು: ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧಿ ಹಾಗೂ ಶಾಂತಿ, ಧರ್ಮ ಸಂದೇಶ ಸಾರಿದ ಮಹನೀಯರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು.

    ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಆಚಾರ ವಿಚಾರಗಳನ್ನು ಜನತೆಗೆ ತಿಳಿಸುವುದು ಎಲ್ಲರ ಕರ್ತವ್ಯವಾಗಿದೆ. ಸ್ವಾತಂತ್ರ್ಯ ಹೋರಾಟದ ಪ್ರಮುಖರು ಮಹಾತ್ಮ ಗಾಂಧಿ. ಆದರೆ ಇಂದು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತಿದ್ದೇವೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಪ್ರಚುರಕ್ಕೆ ಬಂದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಈ ಇಬ್ಬರ ಜನ್ಮ ದಿನದಂದು ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಗಣ್ಯರ ಜನ್ಮ ದಿನಕ್ಕೆ ಅರ್ಥ ಕಲ್ಪಿಸಿ ಕೊಟ್ಟರು. ಅಂತಹ ಮಹಾನ್ ಪುರುಷರ ಮಾರ್ಗದರ್ಶನದಲ್ಲಿ ಸಮಾನತೆಯೊಂದಿಗೆ ಸರ್ವ ಧರ್ಮಗಳನ್ನು ಉಳಿಸಿಕೊಂಡು ಮುಂದೆ ಹೋಗಬೇಕಿದೆ ಎಂದರು.

    ತಹಸೀಲ್ದಾರ್ ಎಂ.ಮಮತಾ ಮಾತನಾಡಿ, ಸತ್ಯ, ಶಾಂತಿ, ಅಹಿಂಸೆ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿ ಅವರು, ಭಾರತ ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಶಾಂತಿ ಸಂದೇಶದ ಮೂಲಕ ತಾವು ಹೇಳಿದ್ದನ್ನು ಮಾಡಿ ತೋರಿಸಿದವರು. ಬುದ್ಧರ ನಂತರ ಅಹಿಂಸೆಯ ಮೂಲಕ ಗಾಧಿಯವರು ಹೋರಾಟ ನಡೆಸಿದವರು. ಗಾಂಧೀಜಿಯವರ ಹೋರಾಟದಿಂದ ಪ್ರೇರಿತರಾದ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರು ತಮ್ಮ 16ನೇ ವಯಸ್ಸಿನಲ್ಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದವರು. ನಂತರದಲ್ಲಿ ಸರ್ಕಾರದಲ್ಲಿ ಮಂತ್ರಿಯಾಗಿ, ಪ್ರಧಾನಿಯಾಗಿ ಉತ್ತಮ ಕೆಲಸ ನಿರ್ವಹಿಸಿದರು. ಇಂತಹವರ ಆದರ್ಶಗಳು ಕೇವಲ ಜಯಂತಿಗೆ ಸೀಮಿತ ಮಾಡದೆ ಅವರ ನಿಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ್, ತಾಪಂ ಇಒ ದಯಾನಂದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ವೈದ್ಯಾಧಿಕಾರಿ ಡಾ.ವಿಜಯ್, ಬಿಆರ್‌ಸಿ ಶಿವಮರಿಯಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷ ಮೂರ್ತಿ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts