ತೇಜಸ್ವಿನಿ ಅನಂತ್ ಕುಮಾರ್ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿತ್ತು: ಬಿಎಸ್​ವೈ

ಚಿತ್ರದುರ್ಗ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ತೇಜಸ್ವಿನಿ ಅನಂತ ಕುಮಾರ್ ಅವರ ಒಂದೇ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಆದರೆ, ಪಕ್ಷದ ಕೇಂದ್ರ ಸಂಸದೀಯ ‌ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಲು ಮಂಡ್ಯಕ್ಕೆ ಹೋಗುವುದಾಗಿ ತಿಳಿಸಿದರು.

ಭೋವಿ ಗುರು ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರನ್ನು ಭೇಟಿ‌ ಮಾಡಿ ಮಾತನಾಡುವೇ. ಸಮುದಾಯದ ಶಾಸಕರು ನಮ್ಮೊಂದಿಗೆ ಇದ್ದಾರೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.