More

    ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

    ಬೆಂಗಳೂರು: ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಎಸ್. ಸುಧಾಕರ್ ಅವರು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದು, ಈ ಕುರಿತು ಸಿಎಂ ಬಳಿ ಸೋಮವಾರ ಚರ್ಚೆ ಮಾಡುವುದಾಗಿ ಕೆಲವು ಸುದ್ದಿವಾಹಿನಿಗಳು ಸುದ್ದಿ ಮಾಡಿದ್ದವು.

    ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

    1ರಿಂದ 9ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ ಕೊಡಲಿದೆ ಸರ್ಕಾರ- ಎಲ್ಲರೂ ಪಾಸ್​ ಪಾಸ್​….

    ಕರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಳ; ಒಂದೇ ದಿನ 3,082 ಮಂದಿಯಲ್ಲಿ ಸೋಂಕು ಪತ್ತೆ!

    ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ

    ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts