ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Sureshkumar
Suresh kumar
Published on

ಬೆಂಗಳೂರು: ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಎಸ್. ಸುಧಾಕರ್ ಅವರು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದು, ಈ ಕುರಿತು ಸಿಎಂ ಬಳಿ ಸೋಮವಾರ ಚರ್ಚೆ ಮಾಡುವುದಾಗಿ ಕೆಲವು ಸುದ್ದಿವಾಹಿನಿಗಳು ಸುದ್ದಿ ಮಾಡಿದ್ದವು.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net