More

    ರಾಜ್ಯದಲ್ಲಿ ಓರ್ವ ಟೆಕ್ಕಿಯಿಂದ ಮೂವರಿಗೆ ಹರಡಿದ ಕೊರೊನಾ ವೈರಸ್​; ನಾವಿದ್ದೇವೆ ಹೆದರಬೇಡಿ ಎಂದು ಜನರಿಗೆ ಧೈರ್ಯ ತುಂಬಿದ ಡಾ. ಸುಧಾಕರ್​

    ಬೆಂಗಳೂರು: ನಿನ್ನೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಟೆಕ್ಕಿಯೋರ್ವನಲ್ಲಿ ಕೊರೊನಾ ವೈರಸ್​ ಇರುವುದು ದೃಢಪಟ್ಟಿತ್ತು. ಇದು ರಾಜ್ಯದ ಮೊದಲ ಕೊರೊನಾ ಪ್ರಕರಣವಾಗಿತ್ತು. ಇಂದು ಆ ಸಂಖ್ಯೆ ನಾಲ್ಕಕ್ಕೆ ಏರಿದೆ.
    ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಟ್ವೀಟ್ ಮೂಲಕ ರಾಜ್ಯದಲ್ಲಿ ನಾಲ್ವರಲ್ಲಿ ಕೊರೊನಾ ವೈರಸ್ ಇರುವುದನ್ನು ಟ್ವಿಟರ್​ ಮೂಲಕ ದೃಢಪಡಿಸಿದ್ದರು.

    ಅದರ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಅವರು ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದು, ಕೊರೊನಾ ಪೀಡಿತರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದ್ದಾರೆ.
    ಕೊರೊನಾ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಕುಟುಂಬದವರ ರಕ್ತ ಪರೀಕ್ಷೆಯನ್ನು ನಿನ್ನೆ ನಡೆಸಲಾಗಿತ್ತು. ಆತನ ಪತ್ನಿ, ಮಗಳು ಹಾಗೂ ಸಹೋದ್ಯೋಗಿಗೂ ಕೊರೊನಾ ಇರುವುದು ಪತ್ತೆಯಾಗಿದೆ. ಅವರ ಸಂಪರ್ಕಕ್ಕೆ ಬಂದಿದ್ದವರನ್ನೆಲ್ಲ ಪ್ರತ್ಯೇಕಿಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ನಾನು ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ನಾಲ್ವರಿಗೆ ಕೊರೊನಾ ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದೇವೆ. ಚಿಕಿತ್ಸೆ, ನಿಯಂತ್ರಣಾ ಕ್ರಮಗಳ ಬಗ್ಗೆ ಚರ್ಚಿಸಲು ಸದ್ಯದಲ್ಲೇ ಇನ್ನೊಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ.

    ರಾಜ್ಯದ ಜನರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಮಾಧ್ಯಮಗಳ ಮೂಲಕ ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ. ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ. 

    ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೊನಾ ವೈರಸ್​ ಸೋಂಕು: ಟ್ವೀಟ್​ ಮಾಡಿ ದೃಢಪಡಿಸಿದ ಆರೋಗ್ಯ ಸಚಿವ ಶ್ರೀರಾಮುಲು

    ‘ನಾನೀಗ ಹೊರಡುವ ಸಮಯ ಬಂದಿದೆ’ ಎಂದು ಹೇಳಿದ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಬಿಚ್ಚಿಟ್ಟ ಸತ್ಯ ಇದು…

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts