More

    ‘ಭಾರತ’ ದೊಡ್ಡ ಆರ್ಥಿಕ ಶಕ್ತಿಯಾಗಿಸಲು ನಮೋ ಶ್ರಮ

    ಪಿರಿಯಾಪಟ್ಟಣ : ಭಾರತವನ್ನು 2047ರ ವೇಳೆಗೆ ವಿಶ್ವದ ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಲಾಷೆಯಾಗಿದೆ ಎಂದು ಬಿಜೆಪಿ ಪಕ್ಷದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಮೈ. ವಿ.ರವಿಶಂಕರ್ ತಿಳಿಸಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಬಿಜೆಪಿ ನೂತನ ಮಂಡಲ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿಯು ಇಡೀ ವಿಶ್ವದಲ್ಲಿ ಒಂದು ದೊಡ್ಡ ಸಂಘಟನೆಯಾಗಿ ಬೆಳೆದಿದ್ದು ಪ್ರಧಾನಿಯಾಗಿ ನರೇಂದ್ರ ಮೋದಿ ಮಾಡಿರುವ ಸಾಧನೆಗಳು ನಮ್ಮೊಂದಿಗೆ ಇವೆ ಎಂದರು.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಳಿಸಿರುವ ಮತಕ್ಕಿಂತ ಕನಿಷ್ಠ ಶೇ.10 ರಷ್ಟು ಹೆಚ್ಚು ಮತಗಳು ಲಭಿಸುವಂತೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಪರಿಶ್ರಮದಿಂದ ದುಡಿಯಬೇಕೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ದಾ ಕರೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವ ಸಮಯದಲ್ಲಿ ನೂತನ ಅಧ್ಯಕ್ಷರಾಗಿ ಪದವಿ ಸ್ವೀಕರಿಸುತ್ತಿರುವುದು ಸವಾಲಿನ ಕೆಲಸವಾಗಿದ್ದು ಸಮತೋಲನವುಳ್ಳ ತಂಡವನ್ನು ಕಟ್ಟಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಮೂಲಕ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದರು.

    ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಬೇಕಿದ್ದು ಸಂಸದ ಪ್ರತಾಪ್ ಸಿಂಹ ಮಾಡಿರುವ ಅಭಿವೃದ್ಧಿ ಕೆಲಸಗಳ ಸಾಧನೆಗಳನ್ನು ಮನೆ ಮನೆಗೆ ಮಾಹಿತಿ ತಲುಪಿಸುವ ಕೆಲಸವಾಗಬೇಕಿದೆ. ನೂತನವಾಗಿ ಜಾರಿಗೆ ತಂದಿರುವ ಗ್ರಾಮ ಚಲೋ ಕಾರ್ಯಕ್ರಮ ಮತ್ತು ಫಲಾನುಭವಿಗಳ ಅಭಿಯಾನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವಂತೆ ಪಕ್ಷದ ಪದಾಧಿಕಾರಿಗಳು ಶ್ರಮಿಸಬೇಕಿದೆ ಎಂದರು.

    ತಾಲೂಕು ಬಿಜೆಪಿ ನೂತನ ಮಂಡಲ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಜಿಪಂ ಸದಸ್ಯ ವಿ.ರಾಜೇಂದ್ರ ಮಾತನಾಡಿ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ತಿಳಿಸಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಜಯರಾಮ್ ಗೌಡ, ತಂಬಾಕು ಮಂಡಳಿ ಉಪಾಧ್ಯಕ್ಷ ಎಚ್.ಸಿ.ಬಸವರಾಜು, ಸದಸ್ಯ ಜಿ.ಸಿ.ವಿಕ್ರಂ ರಾಜ್, ಮಾಜಿ ಸದಸ್ಯ ಪಿ.ವಿ.ಬಸವರಾಜಪ್ಪ, ನಿರ್ಗಮಿತ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮಾಜಿ ಸಚಿವ ಸಿ.ಎಚ್. ವಿಜಯಶಂಕರ್, ಪಿ.ಪ್ರಶಾಂತ್ ಗೌಡ, ಆರ್.ಟಿ.ಸತೀಶ್, ಫಲಾನುಭವಿಗಳ ಸಂಪರ್ಕ ಅಭಿಯಾನದ ಜಿಲ್ಲಾ ಸಹ ಸಂಚಾಲಕಿ ಸವಿತಾ ಚೌಹಾಣ್, ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ಸೋಮಶೇಖರ್, ಜಿಲ್ಲಾ ಸಹಕಾರ್ಯದರ್ಶಿಗಳಾದ ಪಿ.ಜೆ.ರವಿ, ಲೋಕೇಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಗೌಡ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಚನ್ನಬಸವರಾಜು, ಹೆಮ್ಮಿಗೆ ರವಿ, ಮುಖಂಡರಾದ ಗೀತಾ ಗೌಡ, ಶುಭಾಗೌಡ, ಬೆಮ್ಮತ್ತಿ ಕೃಷ್ಣ, ಟಿ.ರಮೇಶ್, ಬೆಮ್ಮತ್ತಿ ಚಂದ್ರು, ಲೋಕಪಾಲಯ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts