More

    ಸಿಎಂ ಬದಲಾವಣೆ ಆಗಿದ್ದರಿಂದಲೇ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಕ್ಕಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

    ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ಆಗಿದ್ದರಿಂದ ಪಂಚಮಸಾಲಿ ಸಮಾಜಕ್ಕೆ ಇಂದಿಗೂ ಮೀಸಲಾತಿ ಸಿಕ್ಕಿಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರೆ ಮೀಸಲಾತಿ ಸಿಕ್ಕಿರುತ್ತಿತ್ತೋ ಏನೋ ಎಂದು ಪಂಚಮಸಾಲಿ ಸಮಾಜದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅದಾಗ್ಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಭರವಸೆ ಇದೆ ಎಂಬುದಾಗಿಯೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಪಂಚಮಸಾಲಿ ಸಮಾಜದ ಬಸವಜಯಮೃತ್ಯುಂಜಯ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ.

    ಬಿಜೆಪಿ ಅಧಿಕಾರದ ಅವಧಿಯಲ್ಲಿ ಮೀಸಲಾತಿ ಸಿಗುವ ಭರವಸೆ ಶೇ. ನೂರರಷ್ಟಿದೆ. ಆದರೆ ಆ ಕುರಿತ ಪ್ರಕ್ರಿಯೆ ತಡವಾಗುತ್ತಿರುವುದು ನಮ್ಮ ಸಮಾಜಕ್ಕೆ ಆತಂಕ ಉಂಟು ಮಾಡಿದೆ‌. ಮುಂದೆ ಚುನಾವಣೆ ಬಂದರೆ ನಮ್ಮ ಹೋರಾಟ ವ್ಯರ್ಥವಾಗುತ್ತದೆ. ಅದಕ್ಕಾಗಿಯೇ ಇದೀಗ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದೇವೆ ಎಂದು ಸ್ವಾಮೀಜಿ ತಿಳಿಸಿದರು.

    ಎಸ್‌ಟಿ-ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಅವರಿಗೆ ಮೀಸಲಾತಿ ಹೆಚ್ಚಳ ಮಾಡಿದ್ದನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಎಸ್‌ಸಿ-ಎಸ್‌ಟಿ ಜತೆಗೆ ನಮಗೆ ಮೀಸಲಾತಿ ಸಿಗುತ್ತದೆ ಎಂದು ಭಾವಿಸಿದ್ದೆವು ಎಂದ ಅವರು ಸರ್ಕಾರ ನಮಗೂ ಮೀಸಲಾತಿ ನೀಡಲಿ ಎಂದು ಒತ್ತಾಯಿಸಿದರು‌. ಅಲ್ಲದೆ ಮೂರು ಬಾರಿ ಸರ್ಕಾರ ಮಾತು ಕೊಟ್ಟು ತಪ್ಪಿದೆ. ಅದು ಮತ್ತೆ ಮಾತು ತಪ್ಪಲ್ಲ ಎನ್ನುವ ಭರವಸೆ ಇದೆ ಎಂದೂ ಹೇಳಿದರು.

    ಪಕ್ಕದ ಮನೆಯವರಿಂದಲೇ ಕೊಲೆ?; ಇಂಟೆಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಸಾವಿನ ಕುರಿತು ಮಹತ್ವದ ಸುಳಿವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts