More

    ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಲೋಕಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅದಕ್ಕೆ ಮುನ್ನುಡಿ ಎಂಬಂತೆ ಈಗಾಗಲೇ 82 ಹುರಿಯಾಳುಗಳ ಹೆಸರನ್ನು ಘೋಷಿಸುವ ಮೂಲಕ ಗೆಲುವ ಹುಮ್ಮಸ್ಸಿನಲ್ಲಿದೆ. ಆದರೆ, ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

    ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್​ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಚುನಾವಣೆಯ ಹೊಸ್ತಿಲಲ್ಲಿ CAA ಜಾರಿ ಅನಗತ್ಯ: ಎಂ.ಕೆ. ಸ್ಟಾಲಿನ್

    ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಟ್ಟಾಗಿ ಗಟ್ಟಿಯಾಗಿ ನಿಲ್ಲಬೇಕು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಗೆಲುವನ್ನು ಖಚಿತಪಡಿಸಬೇಕು. ಸುಪ್ರೀಂ ಕೋರ್ಟ್​ನ ನಿರ್ದೇಶನದ ಹೊರತಾಗಿಯೂ ಚುನಾವಣಾ ಬಾಂಡ್‌ಗಳ ಮೂಲಕ ಪಡೆದಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ಬಹಿರಂಗಪಡಿಸಲು ಬಿಜೆಪಿ ಸಿದ್ಧವಿಲ್ಲ.

    ಜನರು ನಮ್ಮ ಪಕ್ಷಕ್ಕೆ ದೇಣಿಗೆಯಾಗಿ ನೀಡಿದ ಹಣವಿದ್ದ ಬ್ಯಾಂಕ್​ ಖಾತೆಯನ್ನು ಬಿಜೆಪಿಯವರು ಫ್ರೀಜ್​ ಮಾಡಿದ್ದಾರೆ. ನಮ್ಮ ಬಳಿ ಚುನಾವಣೆಗೆ ಖರ್ಚು ಹಣವಿಲ್ಲ. ಆದರೆ, ಇವರು ಮಾತ್ರ ಚುನಾವಣಾ ಬಾಂಡ್​ಗಳ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣವನ್ನು ಲಂಚವಾಗಿ ಪಡೆದಿದ್ದಾರೆ. ಒಬ್ಬ ವ್ಯಕ್ತಿ ಬದುಕಿರುವಾಗ ಅವರ ಹೆಸರಿನಲ್ಲಿ ಸ್ಮಾರಕಗಳನ್ನು ನಿರ್ಮಿಸುವುದಿಲ್ಲ. ಆದರೆ, ಈ ವ್ಯಕ್ತಿಯ ಹೆಸರನ್ನು ಕ್ರಿಕೆಟ್​ ಸ್ಟೇಡಿಯಂಗೆ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಕಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts