More

    ಸಂಸದ ಪ್ರತಾಪ್ ಸಿಂಹ ಅವರಿಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ

    ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರಿಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಹೇಳಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಅರಸರು ತಮ್ಮ ಅಳ್ವಿಕೆಯ ಅವಧಿಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಅರಸರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮೈಸೂರಿನ ಮಹಾರಾಜರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದು, ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿರುವುದಕ್ಕೆ ಕಾರಣವೇನೆಂಬುದನ್ನು ಬಹಿರಂಗಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts