More

    ನೀರಿಗಾಗಿ ಧ್ವನಿ ಎತ್ತಿ ಹೋರಾಡಬೇಕಿದೆ

    ಹಾಸನ: ಕರ್ನಾಟಕವು ಕಾವೇರಿ ನೀರನ್ನು ಹೆಚ್ಚುವರಿಯಾಗಿ ಒಂದು ಇಂಚು ಬಳಕೆ ಮಾಡಲು ಬಿಡಲ್ಲ ಎಂದು ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. ಇದರ ಬಗ್ಗೆ ರಾಜ್ಯಸಭೆಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದರು.


    ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ವಿಚಾರವಾಗಿ ಲೋಕಸಭೆಯಲ್ಲಿ ಹೋರಾಟ ಮಾಡಲು ತುಮಕೂರು, ಬೆಂಗಳೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ ಮತ್ತು ಇತರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕಿದೆ. ರಾಜ್ಯ ಸರ್ಕಾರ ಎಡದಂಡೆ, ಬಲದಂಡೆ ನಾಲೆಯಲ್ಲಿ ಹಾಸನ ಜಿಲ್ಲೆಯ ರೈತರಿಗೆ ನೀರನ್ನು ಹರಿಸಬಾರದು ಎಂದು ಆದೇಶ ಮಾಡಿದೆ. ತುಮಕೂರು ಜಿಲ್ಲೆಯ ಭಾಗಕ್ಕೆ ನೀರು ಹರಿಯಲು ಬಿಟ್ಟಿದ್ದಾರೆ. ಅವರೂ ನಮ್ಮ ರೈತರೇ, ನಮ್ಮ ರೈತರ ಭತ್ತ ಒಣಗುತ್ತಿರುವ ಸಂದರ್ಭದಲ್ಲಿ ಧ್ವನಿ ಎತ್ತಿ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.


    ಹೇಮಾವತಿ ಹಾಗೂ ಕಾವೇರಿ ನದಿಗಳು ನಮ್ಮದು. ಹಾಸನ ಜಿಲ್ಲೆಯ 2 ಲಕ್ಷ ಎಕರೆ ಭೂಮಿ ಮುಳುಗಡೆಯಾಗಿದೆ. ನಮ್ಮ ಹಣದಲ್ಲಿ ಜಲಾಶಯ ಕಟ್ಟಿದ್ದು, ನೀರು ಬಳಕೆ ಮಾಡಲು ಬಿಡಲ್ಲ ಎನ್ನಲು ಅವರ‌್ಯಾರು. ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯ ಜನತೆಗೆ ಆಗುವ ಅನ್ಯಾಯವನ್ನು ಸರಿಪಡಿಸಲು ಶಕ್ತಿ ಮೀರಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.


    ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts