ಶಿವಸೇನೆ ಮತ್ತು ಬಿಜೆಪಿ ಪರಸ್ಪರ ಬೆನ್ನಿಗೆ ಚೂರಿ ಹಾಕಲಿಲ್ಲ ಎಂದ ಶಿವಸೇನೆ ನಾಯಕ ಉದ್ಧವ್​ ಠಾಕ್ರೆ

ಗಾಂಧಿನಗರ: ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಶಿವಸೇನೆ ಹೋರಾಡಿತ್ತು. ಇದು ಉಭಯ ಪಕ್ಷಗಳ ನಡುವಿನ ಬಿರುಕಿಗೆ ಕಾರಣವಾಗಿತ್ತು. ಆದರೆ, ಹಾಗೆಂದು ಉಭಯ ಪಕ್ಷಗಳು ಪರಸ್ಪರ ಬೆನ್ನಿಗೆ ಚೂರಿ ಹಾಕಲಿಲ್ಲ ಎಂಬುದನ್ನು ಗಮನಿಸಬೇಕು ಎಂದು ಶಿವಸೇನೆ ನಾಯಕ ಉದ್ಧವ್​ ಠಾಕ್ರೆ ಹೇಳಿದ್ದಾರೆ.

ಗಾಂಧಿನಗರ ಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಆಯೋಜಿಸಿರುವ ವಿಜಯ್​ ಸಂಕಲ್ಪ್​ ಸಭಾದಲ್ಲಿ ಮಾತನಾಡಿದರು. ಆದರೆ, ಈಗ ಈ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಂಡು ಮತ್ತೆ ಒಂದಾಗಿದ್ದೇವೆ ಎಂದರು.

ಮಹಾರಾಷ್ಟ್ರವಿಧಾನಸಭೆ ಮತ್ತು 2014ರ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಮೈತ್ರಿ ಹೊಂದಿದ್ದರೂ, ಕೆಲವು ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿತ್ತು. ಇದರಿಂದಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದಿಂದ ಶಿವಸೇನೆಯ ಪ್ರತಿನಿಧಿಗಳು ಹೊರಬಂದಿದ್ದರು. ಆದರೆ, ಈಗ ಈ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಉಭಯ ಪಕ್ಷಗಳು ಒಂದಾಗಿವೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *