

ಗಂಗೊಳ್ಳಿ: ಪರಿಸರದ ಅಗತ್ಯದ ಬಗ್ಗೆ ಅರಿತುಕೊಳ್ಳುವುದರ ಜೊತೆಗೆ ಪರಿಸರವನ್ನು ಉಳಿಸುವಲ್ಲಿ ನಾವು ಕಾರ್ಯಪ್ರವೃತ್ತರಾದಾಗಲೇ ವಿಶ್ವ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ. ಇದು ನಿರಂತರವಾಗಿರಬೇಕು ಎಂದು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.
ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಿಕ್ಷಕರಾದ ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು.
ಶಾಲೆ ಪ್ರಭಾರ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಶಿಕ್ಷಕಿ ವಾಲಾಶ್ರೀ ಖಾರ್ವಿ ವಂದಿಸಿದರು.