More

    ಚೌಡಯ್ಯನವರ ಚಿಂತನೆ ಅಳವಡಿಸಿಕೊಳ್ಳುವುದು ಅಗತ್ಯ

    ವಿಜಯವಾಣಿ ಸುದ್ದಿಜಾಲ ಹಾವೇರಿ

    ಸಮಾಜದ ಪ್ರತಿಯೊಬ್ಬರೂ ಅಂಬಿಗರ ಚೌಡಯ್ಯನವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳುವುದರೊಂದಿಗೆ ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುರುಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಹೇಳಿದರು.

    ನಗರದ ಜಿಲ್ಲಾ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

    ನಿಜಶರಣ ಅಂಬಿಗರ ಚೌಡಯ್ಯ ಅವರು ನಮ್ಮ ಜಿಲ್ಲೆಯಲ್ಲಿ ಜನಿಸಿ, ಇಲ್ಲಿಯೇ ಐಕ್ಯಮಂಟಪ ಹೊಂದಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.

    ಉಪನ್ಯಾಸಕ ಪ್ರಕಾಶ ರ್ಬಾ ಮಾತನಾಡಿ, ಅಂಬಿಗರ ಚೌಡಯ್ಯನವರು ವಿಶ್ವಮಾನವತಾವಾದಿ ಹಾಗೂ ದಾರ್ಶನಿಕರು. ಅವರ ವಚನಗಳು ನಿಷ್ಠುರ ಹಾಗೂ ಕಠೋರವಾಗಿದ್ದವು. ಸಾಮಾಜಿಕ ವಿಡಂಬನೆ ಜೊತೆಗೆ ಸಾತ್ವಿಕ ಚಿಂತನೆಗಳನ್ನು ವ್ಯಕ್ತಮಾಡುವ ಸಂದೇಶಗಳನ್ನು ಹೊಂದಿದ್ದವು ಎಂದರು.

    ತಹಸೀಲ್ದಾರ್ ಶಂಕರ ಜಿ.ಎಸ್. ಮಾತನಾಡಿ, ಸಮಾಜದಲ್ಲಿ ಉನ್ನತ ಹುದ್ದೆಗೇರಲು ಮಕ್ಕಳಿಗೆ ಕಡ್ಡಾಯವಾಗಿ ಉನ್ನತ ಶಿಕ್ಷಣ ಕೊಡಿಸಬೇಕು. ವಿದ್ಯಾರ್ಥಿಗಳಲ್ಲಿ ಶ್ರಮ ಮತ್ತು ಪ್ರಯತ್ನವಿದ್ದರೆ ಉತ್ತಮ ಭವಿಷ್ಯವನ್ನು ತಮ್ಮದಾಗಿಸಿಕೊಳ್ಳಬಹುದು ಎಂದರು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರು, ಡಿವೈಎಸ್​ಪಿ ವಿಜಯಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ನಗರಸಭೆ ಸದಸ್ಯ ಗಣೇಶ ಬಿಷ್ಟನಗೌಡ್ರ, ನಗರಸಭೆ ಪೌರಾಯುಕ್ತ ಬಸವರಾಜ ಜಿದ್ದಿ, ಶಿಗ್ಗಾಂವಿ ಪುರಸಭೆ ಸದಸ್ಯ ಪರಶುರಾಮ ಸೊನ್ನದ, ತಾಲೂಕು ಅಧ್ಯಕ್ಷ ಬಸವರಾಜ ಕಳಸೂರ, ಎಚ್.ಎಂ. ದಂಡಿನ, ಕರಬಸಪ್ಪ ಹಳದೂರ, ಪ್ರಕಾಶ ಅಂಬಿಗೇರ, ಶಂಭು ಸಕ್ರಣ್ಣನವರ, ರಾಜು ಕಲ್ಲೂರ, ಪ್ರಶಾಂತ ರ್ಬಾ, ಶಂಕರ ರ್ಬಾ ಇತರರು ಉಪಸ್ಥಿತರಿದ್ದರು.

    ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಭೋವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಸುತಾರ ನಿರ್ವಹಿಸಿದರು.

    ಭಾವಚಿತ್ರ ಮೆರವಣಿಗೆಗೆ ಚಾಲನೆ: ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಗೆ ನರಸೀಪುರದ ಚೌಡಯ್ಯ ಗುರು ಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡು ವಿವಿಧ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುರುಭವನದವರೆಗೆ ಜರುಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts