More

    ನಮ್ಮ ನಡೆ ಮತಗಟ್ಟೆಯ ಕಡೆ; ಜಾಗೃತಿ ಹಾಗೂ ದ್ವಜಾರೋಹಣ

    ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತದಾರರ ಜಾಗೃತಿಗಾಗಿ ಮೊದಲ ಹಂತದ 14 ಕ್ಷೇತ್ರ ವ್ಯಾಪ್ತಿಯ 30,577 ಮತಗಟ್ಟೆಗಳಲ್ಲಿ ಭಾನುವಾರ ಬೆಳಗ್ಗೆ 8ಕ್ಕೆ ಏಕಕಾಲಕ್ಕೆ ‘ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಹಾಗೂ ದ್ವಜಾರೋಹಣ’ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

    ಮತದಾರರಲ್ಲಿ ಜಾಗೃತಿ ಮೂಡಿಸಲು ಹಾಗೂ ಮತಗಟ್ಟೆ ಕುರಿತು ಅಗತ್ಯ ಪ್ರಚಾರಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು, ತಮ್ಮ ವ್ಯಾಪ್ತಿಯ ಎಲ್ಲ ಮತಗಟ್ಟೆಗಳಲ್ಲಿ ಸ್ಥಳೀಯ ಮತದಾರರು, ಚುನಾವಣಾ ಮತದಾರ ಸಾಕ್ಷರತಾ ಸಂಘಗಳ ಸಂಚಾಲಕರು, ಕ್ಯಾಂಪಸ್ ರಾಯಭಾರಿಗಳು, ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ, ಚುನಾವಣೆ ಹಾಗೂ ಮತದಾನದ ಕುರಿತು ಜಾಗೃತಿ ಮೂಡಿಸುವ ಫಲಕಗಳೊಂದಿಗೆ ಚುನಾವಣಾ ದ್ವಜಾರೋಹಣ ನಡೆಸುವಂತೆ ಸೂಚಿಸಿದ್ದಾರೆ.

    ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಮತದಾರರನ್ನು ಸೆಳೆಯಲು ಸ್ಥಳೀಯ ಜಾನಪದ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಕಾಲ್ನಡಿಗೆ ಜಾಥಾ, ಚುನಾವಣಾ ಜಾಗೃತಿ ವಿಷಯಗಳನ್ನೊಳಗೊಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ತಿಳಿಸಲಾಗಿದೆ.

    2023 ನೇ ಸಾಲಿನ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮತದಾರರ ಜಾಗೃತಿಗಾಗಿ ಕರ್ನಾಟಕದಲ್ಲಿ ನಡೆಸಿದ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದ ಯಶಸ್ಸು ದೇಶದಲ್ಲಿಯೇ ಗಮನ ಸೆಳೆದಿತ್ತು.

    ಕಾರ್ಯಕ್ರಮದ ವಿಶೇಷಗಳು

    -ನೈತಿಕ ಚುನಾವಣೆಯ ಕುರಿತು ಮತದಾರರಿಗೆ ಭಿತ್ತಿ ಚಿತ್ರಗಳ ವಿತರಣೆ
    -ಎಲ್.ಇ.ಡಿ. ವಾಹನಗಳ ಮೂಲಕ ಜಾಗೃತಿ.
    -ಮತದಾನದ ಮಹತ್ವ ಕುರಿತು ಬೀದಿ ನಾಟಕ, ಜಾನಪದ ಕಲೆಗಳ ಮೂಲಕ ಮತದಾರರ ಜಾಗೃತಿ.
    -ಸೈಕಲ್, ದ್ವಿಚಕ್ರ ವಾಹನ ಮತ್ತು ಕಾಲ್ನಡಿಗೆ ಜಾಥಾ
    -ಸಿ-ವಿಜಿಲ್, ಕೆವೈಸಿ, ಸಕ್ಷಮ್ ಆಪ್, ಮತದಾರರ ಸಹಾಯವಾಣಿ-1950 ಬಗ್ಗೆ ಮಾಹಿತಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts