More

    ನಮ್ಮ ನಡೆ ಮತಗಟ್ಟೆ ಕಡೆ

    ರಬಕವಿ-ಬನಹಟ್ಟಿ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕೆಂದು ತಹಸೀಲ್ದಾರ್ ಗಿರೀಶ ಸ್ವಾದಿ ಹೇಳಿದರು.

    ತಾಲೂಕು ಸ್ವೀಪ್ ಸಮಿತಿಯಿಂದ ಇಲ್ಲಿನ ಎಸ್‌ಆರ್‌ಎ ಮೈದಾನದಲ್ಲಿ ಆಯೋಜಿಸಿದ್ದ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಚುನಾವಣೆಯಲ್ಲಿ ಮತ ಚಲಾಯಿಸುವುದು ಪ್ರತಿಯೊಬ್ಬ ಮತದಾರನ ಹಕ್ಕು. ಹೀಗಾಗಿ ಪ್ರತಿಯೊಬ್ಬ ಮತದಾರ ಕಡ್ಡಾಯವಾಗಿ ಮತ ಚಲಾಯಿಸಿ ಚುನಾವಣೆ ಹಬ್ಬ ಯಶಸ್ವಿಗೊಳಿಸಬೇಕೆಂದರು.

    ಲೋಕಸಭಾ ವ್ಯಾಪ್ತಿಯ 236 ಮತಗಟ್ಟೆಗಳಲ್ಲಿ ಮತದಾರರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ನಡೆ ಮತಗಟ್ಟೆಗಳ ಕಡೆ ಕಾರ್ಯಕ್ರಮ ಪ್ರಾರಂಭಿಸಿದ್ದೇವೆ. ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ ಧ್ವಜಾರೋಹಣ ನೆರವೇರಿಸಿ ಮತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ಶೌಚಗೃಹ, ಅಂಗವಿಕಲರು, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

    ಚುನಾವಣಾಧಿಕಾರಿ ಸಾಜಿದ್ ಮುಲ್ಲಾ, ಗ್ರೇಡ್-2 ತಹಸೀಲ್ದಾರ್ ಎಸ್.ಬಿ. ಕಾಂಬಳೆ, ಪೌರಾಯುಕ್ತ ಜಗದೀಶ ಈಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts