ಬೇಕೆ ಬೇಕು ನ್ಯಾಯ ಬೇಕು.. ಯುವಕರ ಈ ಪ್ರತಿಭಟನೆ ಏತಕ್ಕಾಗಿ ಗೊತ್ತೆ? ತಿಳಿದ್ರೆ ನಗುವುದಂತು ಪಕ್ಕಾ

Untitled-design-25
Published on

ಪಾಟ್ನಾ: ಪ್ರತಿಭಟನೆಯನ್ನು ಯಾವ ಯಾವ ವಿಚಾರಕ್ಕೆ ನಡೆಸುತ್ತಾರೆ. ಯಾವುದಾದರೂ ಮುಖ್ಯ ವಿಚಾರಗಳು ನಡೆಯದಿದ್ದಾಗ ಅಥವಾ ದೇಶದ ನಾಗರಿಕರಿಗೆ ವ್ಯತಿರಿಕ್ತವಾಗಿ ಏನಾದರೂ ನಡೆದರೆ ಅಂತಹ ಸಂದರ್ಭದಲ್ಲಿ ಪ್ರೊಟೆಸ್ಟ್​​ ಮಾಡುವುದು ಸಹಜ. ಇತ್ತೀಚೆಗೆ ರಾಜಕೀಯ ಪಕ್ಷಗಳು ತಮ್ಮದೆ ಆದ ಕಾರಣಗಳಿಗೆ ಪ್ರತಿಭಟನೆ ನಡೆಸುವುದಾಗಿ ಕರೆ ನೀಡುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ಗುಂಪೊಂದು ಪ್ರತಿಭಟನೆ ಕೂಗುತ್ತಾ ಸಾಗುತ್ತಿರುವ ವಿಡಿಯೋ ವೈರಲ್​ ಆಗುತ್ತಿದೆ. ವಿಚಿತ್ರ ಎಂದರೆ ಇದರಲ್ಲಿ ಬ್ಯೂಟಿ ಪಾರ್ಲರ್​​ ಮುಚ್ಚಬೇಕು ಎಂದು ಕೂಗುತ್ತಾ ಪ್ರತಿಭಟಿಸುತ್ತಿದ್ದಾರೆ.

ಈ ಪ್ರತಿಭಟನೆ ಬಿಹಾರದ ಸಸಾರಾಮ್​ನಲ್ಲಿ ನಡೆದಿದೆ ಎನ್ನಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಬ್ಯೂಟಿ ಪಾರ್ಲರ್ ವಿರುದ್ಧ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ಯೂಟಿ ಪಾರ್ಲರ್ ಬಂದ್ ಮಾಡಿ ಎಂದು ಎಲ್ಲರೂ ಜೋರಾಗಿ ಘೋಷಣೆ ಕೂಗುತ್ತಿರುವುದು ಸ್ಪಷ್ಟವಾಗಿ ಕೇಳುತ್ತಿದೆ. ಅಲ್ಲದೆ ಈ ಪ್ರತಿಭಟನೆಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದು ಸಾಗುತ್ತಿದ್ದಾರೆ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದ್ದು ಜನರಲ್ಲಿ ಹಲವು ಪ್ರಶ್ನೆಗಳು ಮೂಡುತ್ತಿವೆ.

ಈ ಆಂದೋಲನವನ್ನು ಗಂಭೀರ ವಿಚಾರಕ್ಕಾಗಿ ನಡೆಸಲಾಗಿದೆಯೇ ಅಥವಾ ಮನರಂಜನೆಗಾಗಿ ಮಾಡಿರುವ ಚೇಷ್ಟೆಯ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ಪ್ರತಿಭಟನೆಯ ಹಿಂದಿನ ನಿಜವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹಲವರು ತಮಾಷೆಯಾಗಿ ಕಾಮೆಂಟ್​ ಮಾಡುತ್ತಿದ್ದರೆ, ಮತ್ತೆ ಕೆಲವರು ಗಂಭೀರವಾಗಿ ಪರಿಗಣಿಸಿ ಇಂತಹ ಪ್ರತಿಭಟನೆಯಲ್ಲಿ ತ್ರಿವರ್ಣ ಧ್ವಜ ಏಕೆ ಬಳಸಿದ್ದಾರೆ?, ಈ ರೀತಿ ಮಾಡುವುದು ರಾಷ್ಟ್ರಧ್ವಜವನ್ನು ಅವಮಾನಿಸಿದಂತೆ ಎಂದು ಆಕ್ರೋಶ ಹೊರಹಾಕಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net