More

    ಖ್ಯಾತ ಬೌಲರ್​ಗೆ ಮೋದಿಯ ಸಾಂತ್ವನದ ಅಪ್ಪುಗೆ: ನಾವು ಮತ್ತೆ ಪುಟಿದೇಳುತ್ತೇವೆ ಎಂದ ಶಮಿ; ವೈರಲ್ ಆಗುತ್ತಿದೆ ಫೋಟೋ!

    ಬೆಂಗಳೂರು: ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಿನ್ನೆ ನಡೆದ ಏಕದಿನ ವಿಶ್ವಕಪ್​ ಕ್ರಿಕೆಟ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ಎದುರು ಭಾರತ ಸೋತು ವಿಶ್ವಕಪ್ ಕೈತಪ್ಪಿ ಹೋಗಿದೆ. ಈ ಅಂತಿಮ ಹಣಾಹಣಿ ವೇಳೆ ಕ್ರೀಡಾಂಗಣಕ್ಕೆ ಹೋಗಿದ್ದ ಪ್ರಧಾನಿ ಮೋದಿ ಅವರ ನಡೆಯೊಂದು ಈಗ ಮೆಚ್ಚುಗೆಗೆ ಪಾತ್ರವಾಗಿದೆ.

    ನಿನ್ನೆ ಡ್ರೆಸ್ಸಿಂಗ್ ರೂಮ್​ಗೆ ಬಂದು ಪ್ರಧಾನಿ ಮೋದಿ ತೋರಿದ ಕಾಳಜಿ ಬಗ್ಗೆ ಮೊಹಮದ್ ಶಫಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಶಮಿ ಹೇಳಿದ್ದಾರೆ.

    ಇದನ್ನೂ ಓದಿ: ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?

    ಅದರಲ್ಲೂ ವಿಶೇಷವಾಗಿ ಡ್ರೆಸ್ಸಿಂಗ್ ರೂಮ್‌ಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಾವು ಮತ್ತೆ ಪುಟಿದೇಳುತ್ತೇವೆ ಎಂಬುದಾಗಿ ಶಮಿ ಹೇಳಿಕೊಂಡಿದ್ದಾರೆ. ಜತೆಗೆ ಮೋದಿ ತಮ್ಮನ್ನು ತಬ್ಬಿ ಸಂತೈಸುತ್ತಿರುವ ಫೋಟೋವೊಂದನ್ನೂ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಬಹಳಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈಗ ವೈರಲ್ ಆಗಲಾರಂಭಿಸಿದೆ.

    ಈ ಫೋಟೋಗೆ ಪ್ರತಿಕ್ರಿಯಿಸುತ್ತಿರುವ ಕೆಲವರು ಚಂದ್ರಯಾನ-2 ವಿಫಲಗೊಂಡ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರನ್ನು ಪ್ರಧಾನಿ ಮೋದಿ ಸಂತೈಸಿದ್ದ ಫೋಟೋ ಹಂಚಿಕೊಂಡು ಅಂದಿನ ಕ್ಷಣಗಳನ್ನು ಸ್ಮರಿಸಿಕೊಂಡಿದ್ದಾರೆ. ಆ ದಿನ ಶಿವನ್​ಗೆ ಮೋದಿ ಸಂತೈಸಿದ್ದ ಫೋಟೋ ಕೂಡ ವೈರಲ್ ಆಗಿತ್ತು. ನಂತರ ಚಂದ್ರಯಾನ-3 ಯಶಸ್ವಿಯಾಗಿತ್ತು.

    ವಿಶ್ವಕಪ್​ ಫೈನಲ್ ಪಂದ್ಯಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಕಪಿಲ್ ದೇವ್

    ದೀಪಾವಳಿಗೆ ಗಂಡ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಜಗಳ ಆಡುತ್ತ ಪ್ರಾಣ ಕಳ್ಕೊಂಡ್ಲು ಗರ್ಭಿಣಿ ಪತ್ನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts