More

    ಪಠ್ಯಪುಸ್ತಕ ಪರಿಷ್ಕರಣೆ ಮಾಡೇ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

    ಕಲಬುರಗಿ: ಪಠ್ಯಪುಸ್ತಕ ಪರಿಷ್ಕರಣೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿನ್ನೆಯಷ್ಟೇ ಸಮಾನ ಮನಸ್ಕರ ಒಕ್ಕೂಟದವರು ಲಿಖಿತ ಮನವಿ ಮಾಡಿಕೊಂಡಿದ್ದರು. ಈ ಮೂಲಕ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ನಿನ್ನೆ ಮುನ್ನೆಲೆಗೆ ಬಂದಿತ್ತು. ಇದೀಗ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ದನಿಗೂಡಿಸಿದ್ದಾರೆ.

    ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಾವು ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಾಡಿಯೇ ತೀರುತ್ತೇವೆ ಎಂದರು. ಪಠ್ಯಪರಿಷ್ಕರಣೆ ಖಚಿತ ಎಂಬುದನ್ನು ಅವರು ಈ ಮೂಲಕ ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ಕಾಂಗ್ರೆಸ್​​ನವರಿಂದ ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್​!; ಯಾಕೆ, ಏನು? ಇಲ್ಲಿದೆ ಮಾಹಿತಿ..

    ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಮ್ಮ ಋಣ ತೀರಿಸುತ್ತೇವೆ, ಆಡಳಿತ ಸ್ವಚ್ಛಗೊಳಿಸುತ್ತೇವೆ, ಭ್ರಷ್ಟಾಚಾರ ಮಾಡಿದವರಿಗೆ ಕಾನೂನಿನ ರೀತಿ ಶಿಕ್ಷೆ ಕೊಡಿಸುತ್ತೇವೆ. ಆರನೇ ಗ್ಯಾರಂಟಿ ಬಗ್ಗೆ ನಾನು ಹೇಳಿದ್ದೆ, ಅದನ್ನ ಮಾಡಲು ಮುಂದಾಗಿದ್ದೇನೆ ಎಂದೂ ಹೇಳಿದರು.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ಕೆಕೆಆರ್​​ಡಿಬಿಯಲ್ಲಿ ನಡೆದಿರುವ ಹಗರಣಗಳ ತನಿಖೆ ಇನ್ನೆರಡು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶ ಮಾಡಿದ್ದಾರೆ. ಚುನಾವಣಾಪೂರ್ವದಲ್ಲಿ ಕೊಟ್ಟ ಮಾತಿಗೆ ನಾವು ಬದ್ಧರಾಗಿದ್ದೇವೆ, ನುಡಿದಂತೆ ನಡೆದು ತೋರಿಸುತ್ತೇವೆ ಎಂದೂ ಹೇಳಿದರು.

    ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡಲು ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು, ಎಲ್ಲ ನೇಮಕಾತಿ ಅಕ್ರಮಗಳನ್ನು ನಾವು ತನಿಖೆ ಮಾಡಿಸುತ್ತೇವೆ ಎಂಬುದಾಗಿ ಪ್ರಿಯಾಂಕ್ ಹೇಳಿದರು.

    ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ಮಕ್ಕಳಿಗೆ ಹೊಸ ಪುಸ್ತಕ ಕೊಡಿ: ಸಿಎಂಗೆ ಸಮಾನ ಮನಸ್ಕರ ಒಕ್ಕೂಟದ ಮನವಿ

    ರಾಜ್ಯಕ್ಕೆ ಮಾನ್ಸೂನ್ ಆಗಮನ ಯಾವಾಗ?; ಇಲ್ಲಿದೆ ಹವಾಮಾನ ಇಲಾಖೆ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts