ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗೂ ಕಾಂಗ್ರೆಸ್ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಬಗ್ಗೆ ಕೇಳಿದಾಗ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಪ್ರತಿಕ್ರಿಯಿಸಿದರು.
ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು ಅದನ್ನು ನಂಬುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.