

ಅಹಮದಬಾದ್: ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಮಾದರಿಯಲ್ಲೇ ಗುಜರಾತ್ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ. 2024ರ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಮಾಡಿದಂತೆಯೇ ಮುಂದಿನ ಚುನಾವಣೆಯೂ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಹೇಳಿದ್ದಾರೆ.
ಗುಜರಾತ್ ಪ್ರವಾಸದಲ್ಲಿರುವ ರಾಹುಲ್ಗಾಂಧಿ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಕಚೇರಿ ಮೇಲೆ ಅವರು ದಾಳಿ ಮಾಡಿದ್ದಾರೆ. ನಾವು ಭಯಪಡಬೇಕಾಗಿಲ್ಲ, ಅವರು ನಮಗೆ ಸವಾಲನ್ನು ನೀಡಿದ್ದಾರೆ. ನಾವು ಒಟ್ಟಾಗಿ ಗುಜರಾತ್ನಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂಬುದು ಸವಾಲು. ಈಗ ಗುಜರಾತ್ನಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಕಾಂಗ್ರೆಸ್ ಪಕ್ಷ ಸೋಲಿಸಲಿದೆ ಎಂದು ಹೇಳಿದ್ದಾರೆ. ಇದನ್ನು ಲಿಖಿತವಾಗಿ ತೆಗೆದುಕೊಳ್ಳಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷ ಸೋಲಿಸಲಿದೆ. ಕಾಂಗ್ರೆಸ್ ಗುಜರಾತ್ ಅನ್ನು ಗೆಲ್ಲುತ್ತದೆ ಮತ್ತು ರಾಜ್ಯದಿಂದ ಹೊಸ ಆರಂಭವನ್ನು ಮಾಡುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಅಲ್ಲದೆ ಪ್ರಧಾನಿ ಮೋದಿ ಅವರು ದೇವರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ, ಹಾಗಾದರೆ ಲೋಕಸಭೆ ಚುನಾವಣೆಯ ಸಮಯದಲ್ಲಿ ಅಯೋಧ್ಯೆಯಲ್ಲಿ ಬಿಜೆಪಿ ಏಕೆ ಸೋತಿತು? ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಯೋಧ್ಯೆಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದರು. ಆದರೆ ಅವರ ಸಮೀಕ್ಷಾ ವರದಿಯು ಮೋದಿ ಅವರು ಅಯೋಧ್ಯೆಯಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಮತ್ತು ಅವರ ರಾಜಕೀಯ ಜೀವನವು ಅಂತ್ಯಗೊಳ್ಳುತ್ತದೆ ಎಂದು ಬಂದಿತು. ಅದಕ್ಕೆ ಅವರು ಅಯೋಧ್ಯೆಯಿಂದ ಸ್ಪರ್ಧಿಸಿಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್)