More

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಇಲ್ಲಿದೆ ವಿವರ..

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಯಾವ್ಯಾವ ಭಾಗದಲ್ಲಿ ಮಳೆಯಾಗಲಿದೆ, ಯಾವ ಪ್ರಮಾಣದಲ್ಲಿ ಮಳೆ ಆಗುತ್ತದೆ, ಬೆಂಗಳೂರಿನ ಸ್ಥಿತಿ ಏನು? ಈ ಕುರಿತು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

    ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆ ಆಗಲಿದೆ.

    ಇದನ್ನೂ ಓದಿ: ಒಮಿಕ್ರಾನ್​ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!

    ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಕೂಡ ಮಳೆ ಬೀಳುವ ಸಾಧ್ಯತೆ ಇದೆ. ಕರ್ನಾಟಕವಲ್ಲದೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

    ಬೆಂಗಳೂರಿನ ಹುಡುಗಿಯನ್ನು ಮದ್ವೆಯಾಗಿದ್ದ ನೈಜೀರಿಯಾ ಪ್ರಜೆ, ಬರೀ ಬಿಯರ್-ಸಿಗರೇಟ್​ ವಿಷಯಕ್ಕೇ ಕೊಲೆಯಾಗಿ ಹೋದ!

    ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಪತ್ನಿ ವಾಪಸ್ ಬಂದಿಲ್ಲ ಎಂದು ಪತಿ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts