ಜೂನ್​ 3 ರವರೆಗೆ ಬಿರುಸಿನ ಮಳೆ; ಈ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ | Weather Forecast

ವಿಜಯವಾಣಿ - 2025-06-01T170128.593
Published on

Weather Forecast: ಕಳೆದ ಕೆಲವು ದಿನಗಳಿಂದ ಕೇರಳದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಗಡಿಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡಿದ್ದು, ಮೀನುಗಾರರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ ಇಂದೂ ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ತಿಳಿಸಿದೆ.

ಕಾಸರಗೋಡು, ಕಣ್ಣೂರು, ಎರ್ನಾಕುಲಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. 7 ಸೆಂ.ಮೀನಿಂದ 11 ಸೆಂ.ಮೀ ವರೆಗೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಯೆಲ್ಲೋ ಅಲರ್ಟ್

ಜೂನ್ 2: ಕಣ್ಣೂರು, ಕಾಸರಗೋಡು, ಎರ್ನಾಕುಲಂ ಮತ್ತು ಆಲಪ್ಪುಳ

ಜೂನ್ 3: ಕೋಜಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಅಲರ್ಟ್​

ಹವಾಮಾನ ಪ್ರಕಟಣೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕಾಸರಗೋಡು ಜಿಲ್ಲೆಯ ಮುಳಿಯಾರ್ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈ ಮಧ್ಯೆ, ಕಾಸರಗೋಡಿನ ಕೂಡ್ಲು ಮತ್ತು ಪಣತ್ತೂರಿನಲ್ಲಿ ಕ್ರಮವಾಗಿ 14 ಸೆಂ.ಮೀ ಮತ್ತು 12 ಸೆಂ.ಮೀ ಮಳೆ ದಾಖಲಾಗಿದೆ. ಇನ್ನು ಭಾನುವಾರ ಕೇರಳ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net