More

    ನಾಳೆ ರಾಜ್ಯದ ಎಲ್ಲೆಲ್ಲಿ ಜೋರು ಮಳೆ?; ಇಲ್ಲಿದೆ ಅಲರ್ಟ್ ವಿವರ..

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ತಗ್ಗಿದೆ. ಭಾನುವಾರ ಕೆಲವೆಡೆ ಮಾತ್ರ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರ 11, ಕೊಡಗಿನ ಭಾಗಮಂಡಲದಲ್ಲಿ 7 ಸೆಂ.ಮೀ. ಮಳೆ ಬಿದ್ದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಸೆ.13ರಿಂದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಇಳಿಕೆಯಾಗಲಿದೆ.

    ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕೈದು ದಿನಗಳಿಂದ ಮಳೆ ಪ್ರಮಾಣ ಇಳಿಮುಖವಾಗಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಜತೆಗೆ ಆಗಾಗ್ಗೆ ಬಿಸಿಲು ಕಾಣಿಸಿಕೊಳ್ಳುತ್ತಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಕೆರೆ ಬಳಿ ರೀಲ್ಸ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts