Weather Forecast| ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಐದು ದಿನ ಮಳೆ; Orange, Yellow Alert​ ಘೋಷಣೆ

Rains
Published on

ಬೆಂಗಳೂರು: ನವರಾತ್ರಿ ಶುರುವಾದ ಬಳಿಕ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ತಸ್ಥಗೊಂಡಿದೆ. ಅದರಂತೆ ಮುಂದಿನ ಐದು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Forecast) ಮುನ್ಸೂಚನೆ ನೀಡಿದ್ದು, ಕ್ರಮವಾಗಿ ಆರೆಂಜ್​ (Orange) ಹಾಗೂ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಿದೆ.

ಅದರಂತೆ ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert)​ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert)​ ಘೋಷಿಸಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Forecast) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಕೆಲ ವಾರಗಳ ಹಿಂದೆ ಬಿಡುವು ಪಡೆದಿದ್ದ ಮಳೆ ಮತ್ತೊಮ್ಮೆ ಗುಡುಗು, ಸಿಡಿಲನೊಂದಿಗೆ ಅಬ್ಬರಿಸುತ್ತಿದ್ದು, ಈ ತಿಂಗಳಾಂತ್ಯದವರೆಗೂ ಸುರಿಯುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ (Weather Forecast) ಈ ಬಗ್ಗೆ ವರದಿ ಮಾಡಲಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net