ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮೆಳೆಯ ಆರ್ಭಟ ಶುರುವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಇಂದು (ನವೆಂಬರ್ 15) ಕೂಡ ಭಾರೀ ಮಳೆಯಾಗಲಿದೆ (Heavy Rains) ಎಂದು ಹವಮಾನಾ ಇಲಾಖೆ ಮುನ್ಸೂಚನೆ (Weather Forecast) ನೀಡಿದ್ದು, ಅದರಂತೆ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರದಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ.
ಈ ದಿನದ ಮಳೆ ಭವಿಷ್ಯ ಮತ್ತು ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: #KSNDMC pic.twitter.com/mHEebQacg2
— Karnataka State Natural Disaster Monitoring Centre (@KarnatakaSNDMC) November 15, 2024
ನವೆಂಬರ್ 16ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆಯಿರುವ ಸಾಧ್ಯತೆಯಿದೆ.
ಕಳೆದ ಕೆಲ ವಾರಗಳ ಹಿಂದೆ ಬಿಡುವು ಪಡೆದಿದ್ದ ಮಳೆ ಮತ್ತೊಮ್ಮೆ ಗುಡುಗು, ಸಿಡಿಲನೊಂದಿಗೆ ಅಬ್ಬರಿಸುತ್ತಿದ್ದು, ಈ ತಿಂಗಳಾಂತ್ಯದವರೆಗೂ ಸುರಿಯುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ (Weather Forecast) ಈ ಬಗ್ಗೆ ವರದಿ ಮಾಡಲಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಭೀತಿ; ಪಿಚ್ ಯಾರಿಗೆ ಸಹಕಾರಿ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
Toxic ಅಖಾಡಕ್ಕೆ ಎಂಟ್ರಿ ಕೊಟ್ಟ ಮತ್ತೊಬ್ಬ Hollywood Star; ವಿಡಿಯೋ ವೈರಲ್