ಭಾರಿ ಮಳೆ ಮುಂದುವರಿಕೆ: ನಾಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

RAIN NEW
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಗುರುವಾರವೂ ಬೆಂಗಳೂರು ಸೇರಿ ರಾಜ್ಯದ ಇನ್ನಿತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಗದಗದಲ್ಲಿ ನ.5,6ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನ. 7, 8ರಂದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net