More

    2 ದಿನ ಗುಡುಗು-ಮಿಂಚು ಸಹಿತ ಭಾರಿ ಮಳೆ: ಏ. 14, 15ರಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಏ.12ರ ಬಳಿಕ ಮಳೆ ಬಿರುಸುಗೊಳ್ಳಲಿದೆ. ಈಗಾಗಲೇ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದಲ್ಲಿ ಏ.14, 15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.13ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ. ಮುಂದಿನ 48 ತಾಸು ರಾಜ್ಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ, ನಂತರ ಬಿರುಸುಗೊಳ್ಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಇದನ್ನೂ ಓದಿ: ಬೈಕ್​ನಲ್ಲಿ ಹೋಗುವಾಗ ಪ್ರಿಯಕರನ ಬೆನ್ನಿಗೆ ಇರಿದ ಪ್ರೇಯಸಿ; ಬಿದ್ದರೂ ಬಿಡದೆ ಮತ್ತೆ ಮತ್ತೆ ಇರಿದು ಸಾಯಿಸಿದಳು!

    ರಾತ್ರಿ 10ರ ಬಳಿಕ ಜನರು ಬೇಕಾಬಿಟ್ಟಿ ಓಡಾಡುವಂತಿಲ್ಲ: ಕಮಲ್ ಪಂತ್

    ದ್ವಿಚಕ್ರ ವಾಹನ ಸವಾರರೇ ಹುಷಾರ್!; ಬೈಕ್‌ಗಳಿಗೆ ಮಿರರ್- ಇಂಡಿಕೇಟರ್ ಲೈಟ್​ ಇಲ್ಲದಿದ್ದರೆ 500 ರೂ. ದಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts