More

    ಮುಂದಿನ 3 ದಿನ ಜೋರು ಮಳೆ; ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ, ಮುಂದಿನ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಜೋರಾಗಿ ಸುರಿಯಲಿದೆ. ಸೋಮವಾರ ರಾಜಧಾನಿ ಬೆಂಗಳೂರಿನ ಹೊರಮಾವು, ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ನೂರು ಮಿ.ಮೀ. ವರ್ಷಧಾರೆಯಾಗಿದೆ.

    ಇದನ್ನೂ ಓದಿ: ಜಿಎಸ್​ಟಿ ಸಂಗ್ರಹದಲ್ಲಿ ದಾಖಲೆ; 1.87 ಲಕ್ಷ ಕೋಟಿ ರೂ. ಸಂಗ್ರಹ!

    ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗಿನಲ್ಲಿ ಮೇ 2ರಿಂದ ಮೇ 4ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂದಿನ 48 ಗಂಟೆ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ.

    ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!

    ನಿರಂತರ ಮಳೆ ಹಾಗೂ ವಾತಾವರಣದಲ್ಲಿ ತೇವಾಂಶ ಇರುವುದರಿಂದ ರಾಯಚೂರು, ವಿಜಯಪುರ, ಕಲಬುರಗಿ, ಬೀದರ್ ಹಾಗೂ ಬಳ್ಳಾರಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿತವಾಗಿದೆ.

    ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!

    ಅಂತಿಮ ವರದಿ ಬಿಡುಗಡೆ: ನೈಋತ್ಯ ಮಾನ್ಸೂನ್ ಕುರಿತು ಎರಡನೇ ವರದಿಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಸಾಂತ್ಯ ವೇಳೆಗೆ ಬಿಡುಗಡೆ ಮಾಡಲಿದೆ. ಈಗಾಗಲೇ ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಿದ್ದ ಮೊದಲ ವರದಿಯಲ್ಲಿ ದೇಶಾದ್ಯಂತ ವಾಡಿಕೆಯಷ್ಟೇ ಮಳೆ ಸುರಿಯಲಿದೆ ಎಂಬುದು ತಿಳಿದುಬಂದಿದೆ.

    ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts