More

    ಹವಾಮಾನ ಮುನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಏ.15 ರಿಂದ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಏ.15ರಿಂದ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇದನ್ನೂ ಓದಿ:  ಸರ್ಕಾರಿ ಆಸ್ಪತ್ರೆ ಎಡವಟ್ಟು; ಬದುಕಿದ್ದ ಮಗುವಿಗೆ ಡೆತ್‌ ಸರ್ಟಿಫಿಕೇಟ್..‌ಶವ ಸಂಸ್ಕಾರದ ವೇಳೆ ಉಸಿರಾಡಿದ ಮಗು!
    ಮಂಗಳವಾರ (ಏ.11) ಮಾತ್ರ ದಕ್ಷಿಣ ಒಳನಾಡಿನ ಕೆಲವಡೆ ಮಳೆ ಸುರಿಯಲಿದೆ. ನಂತರ, ಮೂರು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ. ಸೋಮವಾರ ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಹಾಗೂ ಬದಾಮಿಯಲ್ಲಿ ಕನಿಷ್ಠ ತಾಪಮಾನದಲ್ಲಿ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೆಲ ಜಿಲ್ಲೆಗಳಲ್ಲಿ ಸುರಿದ ಮಳೆಯಿಂದ ತಾಪಮಾನ ಏರಿಳಿತವಾಗುತ್ತಿದೆ.

    ಈ ಗ್ರಾಮದ ಸಮಾರಂಭಗಳಲ್ಲಿ ಬಿಯರ್ ಬ್ಯಾನ್; ಕಾರಣ ಕೇಳಿದರೆ ಬರುತ್ತೆ ವಿಚಿತ್ರ ಉತ್ತರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts