More

  ಅಬ್ಬರಿಸಲಿದೆ ಮುಂಗಾರು ಮಾರುತ; ವಾರ ಪೂರ್ತಿ ಮಳೆ ಸುರಿಯೋದು ಪಕ್ಕಾ

  ಬೆಂಗಳೂರು: ಬೆಂಗಳೂರಿನಲ್ಲಿ ಮೇ 19ರಿಂದ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

  ಬೆಂಗಳೂರಲ್ಲಿ ರಾತ್ರಿ ಭರ್ಜರಿ ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದಲೂ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದ್ದು, ಇಂದು ಕೂಡ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.

  ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

  ಮೇ 20 ರವರೆಗೆ ಬೆಂಗಳೂರಲ್ಲಿ ಮಳೆ ಮುನ್ಸೂಚನೆ ಇದೆ. ಬೆಂಗಳೂರಿನ ಎಲ್ಲೆಡೆ ರಾತ್ರಿ 10 ಗಂಟೆ ಮೇಲೆ ವಿದ್ಯುತ್​ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಕೂಡ ತಿಳಿಸಿದೆ. ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದಿದ್ದು ವಾತಾವರಣ ತಂಪಾಗಿದೆ.

  ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಉತ್ತಮವಾಗಿದೆ. ಈ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ. ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts