More

    ಮಳೆಯ ಮುನ್ಸೂಚನೆ; ವಿಪರೀತ ಬಿಸಿಲಿನ ನಡುವೆ ಭೂಮಿಗೆ ತಂಪೆರೆಯಲಿದ್ದಾನೆ ಮಳೆರಾಯ

    ಬೆಂಗಳೂರು: ಕರ್ನಾಟಕದಾದ್ಯಂತ ಬಿಸಿಲು ತೀವ್ರವಾಗಿದೆ, ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ, ಇಂದು ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯೂ ತುಂಬಾ ಬೆಚ್ಚಗಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಉಳಿದೆಡೆ ಒಣ ಹವೆ ಇರಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts